ಉಡುಪಿ: ‘ನಡಿಗೆ’ ಹಳೆ ಪಾದರಕ್ಷೆಗಳ ಸಂಗ್ರಹ ಅಭಿಯಾನಕ್ಕೆ ಚಾಲನೆ - Mahanayaka

ಉಡುಪಿ: ‘ನಡಿಗೆ’ ಹಳೆ ಪಾದರಕ್ಷೆಗಳ ಸಂಗ್ರಹ ಅಭಿಯಾನಕ್ಕೆ ಚಾಲನೆ

udupi
30/11/2023

ಉಡುಪಿ: ಕರಾವಳಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಉಡುಪಿ ಎಂಜಿಎಂ ಕಾಲೇಜಿನ ಆವರಣದಲ್ಲಿ ಹಮ್ಮಿಕೊಳ್ಳಲಾದ ಮೂರು ದಿನಗಳ ಸಾವಿರ ಹೆಜ್ಜೆಗಳಿಗೆ ನಿಮ್ಮ ಕೊಡುಗೆ ‘ನಡಿಗೆ’ ಹಳೆಯ ಪಾದರಕ್ಷೆಗಳ ಸಂಗ್ರಹ ಅಭಿಯಾನಕ್ಕೆ ಗುರುವಾರ ಚಾಲನೆ ನೀಡಲಾಯಿತು.

ಪರಿಸರ ವಾದಿ ದಿನೇಶ್ ಹೊಳ್ಳ ಮಾತನಾಡಿ, ಪರಿಸರಕ್ಕೆ ಪೂರಕವಾದ ಈ ಅಭಿಯಾನದಿಂದ ಬರಿಗಾಲಿನಲ್ಲಿ ಕಾಡು ಮೇಡುಗಳಲ್ಲಿ ಕೀಲೋ ಮೀಟರ್ ಗಟ್ಟಲೆ ಶಾಲೆಗಳಿಗೆ ನಡೆದುಕೊಂಡೇ ಹೋಗುವ ಆದಿವಾಸಿ ಬಡ ಮಕ್ಕಳಿಗೆ ಬಹಳಷ್ಟು ಅನುಕೂಲವಾಗಲಿದೆ. ಚಪ್ಪಲಿಯನ್ನು ಮರುಬಳಕೆಗೆ ದಾನವಾಗಿ ನೀಡುವುದ ರಿಂದ ಪರಿಸರಕ್ಕೂ ದೊಡ್ಡ ಕೊಡುಗೆ ನೀಡಿದಂತಾಗುತ್ತದೆ ಎಂದರು.

ಸಂಸ್ಕೃತಿ ವಿಶ್ವ ಪ್ರತಿಷ್ಛಾನದ ಸ್ಥಾಪಕಾಧ್ಯಕ್ಷ ವಿಶ್ವನಾಥ ಶೆಣೈ, ಕಾರ್ಕಳ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಸಹಸಂಸ್ಥಾಪಕ ಅಶ್ವಥ್ ಎಸ್.ಎಲ್., ಗಿರೀಜಾ ಗ್ರೂಪ್ನ ಪ್ರವರ್ತಕ ರವೀಂದ್ರ ಶೆಟ್ಟಿ, ಹೋಪ್ ಇಂಡಿಯಾ ಫೌಂಡೇಶನ್ನ ಸ್ಥಾಪಕ ಅನ್ಸಾರ್ ಅಹ್ಮದ್, ಮಣಿಪಾಲ ಮಹಿಳಾ ಸಮಾಜ ಅಧ್ಯಕ್ಷಷೆ ಡಾ.ಸುಲತಾ ಭಂಡಾರಿ, ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ.ಲಕ್ಷ್ಮೀನಾರಾಯಣ ಕಾರಂತ, ವಿಷನ್ ಅಕಾಡೆಮಿ ಆಫ್ ಮ್ಯೂಸಿಕ್ ಇದರ ಸಂಸ್ಥಾಪಕ ಅಡಾಲ್ಫ್ ಶೆರ್ವಿನ್ ಅಮ್ಮನ್ನ ಉಪಸ್ಥಿತರಿದ್ದರು.

ಕಾರ್ಯಕ್ರಮದ ರೂವಾರಿ ಅವಿನಾಶ್ ಕಾಮತ್ ಪ್ರಾಸ್ತಾವಿಕವಾಗಿ ಮಾತ ನಾಡಿದರು. ಅಭಿಗೈಲ್ ಎಸ್.ಅಂಚನ್ ವಂದಿಸಿದರು. ಉಪನ್ಯಾಸ ಸುಚಿತ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ