ಹಳೆಯ ವಿಡಿಯೋ ವೈರಲ್: ವಿಡಿಯೋ ಹಬ್ಬಿಸಿದರೆ ಕಾನೂನು ಕ್ರಮದ ಎಚ್ಚರಿಕೆ
ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕನಿಗೆ ಒಂದೂವರೆ ವರ್ಷದ ಹಿಂದೆ ಥಳಿಸಿದ ಘಟನೆಗೆ ಸಂಬಂಧಿಸಿದ ಹಳೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಎಸ್ಪಿ ಡಾ. ಅಮಟೆ ವಿಕ್ರಂ ಎಚ್ಚರಿಸಿದ್ದಾರೆ.
ಈ ಬಗ್ಗೆ ಪ್ರಕಟಣೆಯಲ್ಲಿ ಸ್ಟಷ್ಟನೆ ನೀಡಿರುವ ಎಸ್ಪಿಯವರು, ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಸಂಬಂಧಿಸಿದಂತೆ ಬಾಲಕನೋರ್ವನಿಗೆ ಕೆಲ ಯುವಕರು ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಘಟನೆಯು ದಿನಾಂಕ 27/10/2021ರಂದು ಸುಬ್ರಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಬಗ್ಗೆ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 77/2021 ರಂತೆ ಪ್ರಕರಣ ದಾಖಲಿಸಿಕೊಂಡು 10 ಜನ ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಪ್ರಸ್ತುತ ಈ ಪ್ರಕರಣವು ನ್ಯಾಯಾಂಗ ವಿಚಾರಣೆಯಲ್ಲಿದೆ ಎಂದು ತಿಳಿಸಿದ್ದಾರೆ.
ಈ ರೀತಿಯ ಹಳೆಯ ವಿಡಿಯೋಗಳನ್ನು ಅದರ ಪೂರ್ವಾಪರತೆ ಪರಿಶೀಲನೆ ಮಾಡದೇ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw