ತೋಟದ ಗುಂಡಿಯ ನೀರೇ ಗತಿ: ಕಳಸ ತಾಲೂಕಿನ ಕಳಕೋಡು ಗ್ರಾಮದ ವಿದ್ಯಾರ್ಥಿಗಳ ದುಸ್ಥಿತಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಕಳಕೋಡು ಗ್ರಾಮದಲ್ಲಿ ಪ್ರಾಥಮಿಕ ಶಾಲಾ ಮಕ್ಕಳು ಕುಡಿಯುವ ನೀರಿನ ತೀವ್ರ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.
ಶಾಲೆಯಲ್ಲಿ ನೀರಿನ ಸೌಲಭ್ಯಗಳ ಕೊರತೆಯಿಂದ, ಪುಟ್ಟ ಮಕ್ಕಳು ತೋಟದಲ್ಲಿರುವ ಗುಂಡಿಯಿಂದ ಪ್ರತಿದಿನ 80 ಮೀಟರ್ ದೂರದಿಂದ ನೀರು ಹೊತ್ತು ತರುವಂತಾಗಿದೆ. ಈ ನೀರು ಕುಡಿಯಲು ಯೋಗ್ಯವಲ್ಲದಿದ್ದರೂ, ಅದನ್ನೇ ಕುಡಿಯಲು ಮತ್ತು ಅಡುಗೆಗೆ ಬಳಸುತ್ತಿದ್ದಾರೆ.
ಈ ಸಮಸ್ಯೆಯನ್ನು ಪರಿಹರಿಸಲು, 500 ಮೀಟರ್ ದೂರದಲ್ಲಿರುವ ಟ್ಯಾಂಕ್ ನಿಂದ ಪೈಪ್ ಲೈನ್ ಅನ್ನು ಶಾಲೆಗೆ ಎಳೆಯುವಂತೆ ಗ್ರಾಮಸ್ಥರು ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ (ಇಓ) ಗೆ ಮನವಿ ಸಲ್ಲಿಸಿದ್ದಾರೆ. ಆದರೆ, ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಈ ನಿರ್ಲಕ್ಷ್ಯದಿಂದ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂತಹ ಪರಿಸ್ಥಿತಿಯಲ್ಲಿ, ಮಕ್ಕಳ ಆರೋಗ್ಯ ಮತ್ತು ಶಿಕ್ಷಣದ ಮೇಲೆ ಪರಿಣಾಮ ಬೀಳುತ್ತದೆ. ಅಧಿಕಾರಿಗಳು ತಕ್ಷಣ ಸ್ಪಂದಿಸಿ, ಶಾಲೆಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/HEkqDgrW2BlJLad5kZ1DX7