ವಯನಾಡ್ ಗುಡ್ಡ ಕುಸಿತ ಪ್ರಕರಣ: ದುರಂತದಲ್ಲಿ ಕನ್ನಡಿಗರೂ ಬಲಿ, ಹಲವರು ನಾಪತ್ತೆ!
ಮಂಡ್ಯ: ಕೇರಳದ ವಯನಾಡ್ ನಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ ನೂರಾರು ಮಂದಿ ಪ್ರಾಣ ಬಿಟ್ಟಿದ್ದಾರೆ. ಇನ್ನೂ ಕೂಡ ರಕ್ಷಣಾ ಕಾರ್ಯಾಚರಣೆ ನಡೆಯುತ್ತಲೇ ಇದೆ. ಈ ದುರಂತದಲ್ಲಿ ಕನ್ನಡಿಗರೂ ಸಿಲುಕಿದ್ದಾರೆ.
ಚಾಮರಾಜನಗರ ಜಿಲ್ಲೆಯ ಇರಸವಾಡಿ ಗ್ರಾಮದ ರಾಜೇಂದ್ರ (50), ರತ್ನಮ್ಮ (45), ಪುಟ್ಟಸಿದ್ದಶೆಟ್ಟಿ (62), ರಾಣಿ (50 ಮೃತಪಟ್ಟಿದ್ದಾರೆ.
ಅಲ್ಲದೇ ಮಂಡ್ಯ ಜಿಲ್ಲೆ ಕೆಆರ್‌ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಝಾನ್ಸಿರಾಣಿ ಕುಟುಂಬ ಸಂಕಷ್ಟಕ್ಕೀಡಾಗಿದೆ. ಝಾನಿರಾಣಿ ಪುತ್ರ ನಿಹಾಲ್ (2), ಅತ್ತೆ ಲೀಲಾವತಿ (55) ನಾಪತ್ತೆಯಾಗಿದ್ದಾರೆ.
ಮೈಸೂರಿನ ಸರಗೂರಿನ ಅನಿಲ್ ಕುಮಾರ್ ಎಂಬವರನ್ನು ಝಾನ್ಸಿರಾಣಿ ವಿವಾಹವಾಗಿದ್ದರು. ಅನಿಲ್ ಕೇರಳದ ಮುಂಡಕೈಯಲ್ಲಿ ನೆಲೆಸಿದ್ದರು. ಪತ್ನಿ ಝಾನ್ಸಿ, ಪುತ್ರ ನಿಹಾಲ್ ಹಾಗೂ ತಂದೆ-ತಾಯಿ ಜೊತೆ ವಾಸವಿದ್ದರು ಎಂದು ತಿಳಿದು ಬಂದಿದೆ.
ಅನಿಲ್ ಹಾಗೂ ಲೀಲಾವತಿ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಮತ್ತೊಂದೆಡೆ ಗಂಭೀರವಾಗಿ ಗಾಯಗೊಂಡಿರುವ ಅನಿಲ್ ಹಾಗೂ ಅವರ ಪತ್ನಿ ಝಾನ್ಸಿ, ತಂದೆ ದೇವರಾಜು ಅವರು ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: