ಬಿಜೆಪಿ, ಆರ್‌ಎಸ್‌ಎಸ್ ಕೈಯಲ್ಲಿ ಭಾರತ: ನಮ್ಮದಾಗಿಸಲು ಹೋರಾಟ ಅಗತ್ಯ ಎಂದ ರಾಹುಲ್ ಗಾಂಧಿ
ಬಿಜೆಪಿ, ಆರ್‌ಎಸ್‌ಎಸ್ ವಶಪಡಿಸಿಕೊಂಡಿರುವ ಭಾರತ ವಿರುದ್ಧ ಹೋರಾಟ ನಡೆಸಬೇಕೆಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಕರೆ ನೀಡಿದ್ದಾರೆ. ನಾವು ಆರ್‌ಎಸ್‌ಎಸ್ ಸಿದ್ಧಾಂತದ ವಿರುದ್ಧ ಹೋರಾಡುತ್ತಿದ್ದೇವೆ. ಇಂದು ಬಿಜೆಪಿ ಮತ್ತು ಆರ್‌ಎಸ್‌ಎಸ್ ನಮ್ಮ ದೇಶದ ಪ್ರತಿಯೊಂದು ಸಂಸ್ಥೆಯನ್ನು ವಶಪಡಿಸಿಕೊಂಡಿವೆ ಎಂದು ಆರೋಪಿಸಿದ್ದಾರೆ.
ಎಐಸಿಸಿ ಹೊಸ ಕಟ್ಟಡ ಉದ್ಘಾಟನೆ ವೇಳೆ ಮಾತನಾಡಿದ ರಾಹುಲ್ ಗಾಂಧಿ, ನಾವು ಆರ್‌ಎಸ್‌ಎಸ್ ಸಿದ್ಧಾಂತದ ವಿರುದ್ಧ ಹೋರಾಡುತ್ತಿದ್ದೇವೆ. ಇಂದು ಬಿಜೆಪಿ ಮತ್ತು ಆರ್‌ಎಸ್‌ಎಸ್ ನಮ್ಮ ದೇಶದ ಪ್ರತಿಯೊಂದು ಸಂಸ್ಥೆಯನ್ನು ವಶಪಡಿಸಿಕೊಂಡಿವೆ. ಹೀಗಾಗಿ ಈ ಎರಡು ಸಂಸ್ಥೆಗಳು ವಶಪಡಿಸಿರುವ ಭಾರತದ ವಿರುದ್ಧ ಹೋರಾಡಬೇಕಿದೆ ಎಂದರು.
ಮಾಧ್ಯಮವು ಇನ್ನು ಕೂಡ ಮುಕ್ತ ಮತ್ತು ನ್ಯಾಯಯುತವಾಗಿಲ್ಲ. ಮಹಾರಾಷ್ಟ್ರದಲ್ಲಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳ ನಡುವೆ ಸುಮಾರು ಒಂದು ಕೋಟಿ ಹೊಸ ಮತದಾರರು ದಿಢೀರ್ ಕಾಣಿಸಿಕೊಂಡಿದ್ದಾರೆ. ನಮ್ಮ ಚುನಾವಣಾ ವ್ಯವಸ್ಥೆಯಲ್ಲಿ ಗಂಭೀರ ಸಮಸ್ಯೆ ಇದೆ ಮತ್ತು ಪಾರದರ್ಶಕವಾಗಿರುವುದು ಚುನಾವಣಾ ಆಯೋಗದ ಕರ್ತವ್ಯ ಎಂದು ಹೇಳಿದರು.ಈ ದೇಶದಲ್ಲಿ ಬಿಜೆಪಿಯನ್ನು ತಡೆಯಲು ಬೇರೆ ಯಾವುದೇ ಪಕ್ಷದಿಂದ ಸಾಧ್ಯವಿಲ್ಲ. ಅವರನ್ನು ತಡೆಯಬಲ್ಲ ಏಕೈಕ ಪಕ್ಷ ಕಾಂಗ್ರೆಸ್ ಎಂದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj