ನಮ್ಮ ಜೀವ ಉಳಿಸಿಕೊಳ್ಳಲು ಕೊಂದೆವು: ಮಾಜಿ ಡಿಜಿ ಓಂ ಪ್ರಕಾಶ್ ಹತ್ಯೆಗೆ ಬಗ್ಗೆ ಪತ್ನಿ ಪಲ್ಲವಿ ಹೇಳಿಕೆ!

ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಪಲ್ಲವಿ ಹಾಗೂ ಮಗಳು ಕೃತಿ ಪೊಲೀಸ್ ವಶದಲ್ಲಿದ್ದಾರೆ.
ಪೊಲೀಸ್ ವಿಚಾರಣೆ ವೇಳೆ ಪತ್ನಿ ಪಲ್ಲವಿ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಪದೇಪದೆ ಗನ್ ತಂದು ನನಗೆ, ನನ್ನ ಮಗಳಿಗೆ ಬೆದರಿಕೆ ಹಾಕುತ್ತಿದ್ದರು. ಶೂಟ್ ಮಾಡುವುದಾಗಿ ಹೆದರಿಸುತ್ತಿದ್ದರು. ಬೆಳಗ್ಗೆಯಿಂದ ಬೇರೆಬೇರೆ ವಿಚಾರಕ್ಕೆ ಮನೆಯಲ್ಲಿ ಜಗಳವಾಗಿದೆ. ಮಧ್ಯಾಹ್ನ ಜಗಳ ವಿಕೋಪಕ್ಕೆ ಹೋಗಿ ನಮ್ಮನ್ನೇ ಕೊಲೆ ಮಾಡಲು ಓಂಪ್ರಕಾಶ್ ಯತ್ನಿಸಿದ್ದರು. ನಮ್ಮ ಜೀವ ಉಳಿಸಿಕೊಳ್ಳಲು ಅವರನ್ನು ಕೊಂದಿರುವುದಾಗಿ ಪತ್ನಿ ಹೇಳಿಕೆ ನೀಡಿದ್ದಾರೆ ಎಂದು ವರದಿಗಳಿಂದ ತಿಳಿದು ಬಂದಿದೆ.
ಖಾರದಪುಡಿ ಹಾಗೂ ಅಡುಗೆ ಎಣ್ಣೆ ಹಾಕಿದೆವು. ಕೈಕಾಲು ಕಟ್ಟಿ ಚಾಕುವಿನಿಂದ ಚುಚ್ಚಿದ್ದೆವು ಎಂದು ಕೊಲೆಯ ಬಗ್ಗೆ ಪತ್ನಿ ಪಲ್ಲವಿ ಹೇಳಿಕೆ ನೀಡಿದ್ದಾರೆ.
ಸದ್ಯ ಪ್ರಕರಣದಲ್ಲಿ ಪಲ್ಲವಿ ಮೊದಲ ಆರೋಪಿಯಾಗಿದ್ದರೆ, ಹತ್ಯೆಯಲ್ಲಿ ಮಗಳ ಪಾತ್ರದ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪೊಲೀಸ್ ವಶದಲ್ಲಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: