ಯಾರೂ ಬೇಡ ಅಂದರೂ ನಾವು ಒಳಮೀಸಲಾತಿ ಜಾರಿ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಬಗ್ಗೆ ಅನುಮಾನ ಬೇಡ. ಯಾರೂ ಬೇಡ ಅಂದರೂ ನಾವು ಒಳಮೀಸಲಾತಿಯನ್ನು ಸುಪ್ರೀಂಕೋರ್ಟ್ ಆದೇಶದನ್ವಯ ಜಾರಿ ಮಾಡಿಯೇ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ, ಡಾ.ಬಾಬು ಜಗಜೀವನ ರಾಮ್ ಅವರ 118ನೇ ಜನ್ಮ ದಿನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನ್ಯಾ. ನಾಗಮೋಹನ್ ದಾಸ್ ಅವರು ಎರಡು ತಿಂಗಳ ಕಾಲಾವಧಿ ಕೇಳಿದ್ದು, ಪೂರ್ಣ ವರದಿ ಕೈಸೇರಿದ ಬಳಿಕ ಯಾರಿಗೂ ಅನ್ಯಾಯ ಆಗದಂತೆ ಒಳಮೀಸಲಾತಿಯನ್ನು ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಿದರು.
ವಿರುದ್ಧ ಮಾತಾಡುತ್ತಿದ್ದವರೆಲ್ಲಾ ಈಗ ಮೀಸಲಾತಿ ಪಡೆದು ಸವಲತ್ತುಗಳನ್ನು ಅನುಭವಿಸುತ್ತಿದ್ದಾರೆ. ಆದ್ದರಿಂದ ಈಗ ಮೀಸಲಾತಿ ವಿರೋಧಿಸುವವರು ಯಾರೂ ಇಲ್ಲ ಎಂದು ಇದೇ ವೇಳೆ ಮಾರ್ಮಿಕವಾಗಿ ನುಡಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: