ಹಿಜಾಬ್ ವಿವಾದ: ಹಿಜಾಬ್ ಧರಿಸುವುದು ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದ ಹೈಕೋರ್ಟ್
ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಸರ್ಕಾರದ ಸಮವಸ್ತ್ರ ಆದೇಶವನ್ನು ಎತ್ತಿ ಹಿಡಿದಿದೆ.
ವರದಿಗಳ ಪ್ರಕಾರ ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ ಎಂದು ಹೇಳಿರುವ ಹೈಕೋರ್ಟ್ ತ್ರಿ ಸದಸ್ಯ ಪೀಠ, ಶಿಕ್ಷಣ ಸಂಸ್ಥೆಗಳಿಗೆ ಸಮವಸ್ತ್ರ ನಿಗದಿಪಡಿಸುವ ಅಧಿಕಾರ ಇದೆ ಎಂದು ಹೇಳಿದೆ ಎಂದು ಎನ್ನಲಾಗಿದೆ.
ಇನ್ನೂ ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ಹೈಕೋರ್ಟ್ ಹೇಳಿದ್ದು, ಸರ್ಕಾರದ ಸಮವಸ್ತ್ರ ನೀತಿಯನ್ನು ಎತ್ತಿ ಹಿಡಿದಿದ್ದು, ಮಹಿಳೆಯರು ಹಿಜಾಬ್ ಧರಿಸುವುದು ಕಡ್ಡಾಯವಲ್ಲ ಎಂದು ಹೇಳಿದೆ ಎಂದು ವರದಿಯಾಗಿದೆ.
ಬಹುದಿನಗಳಿಂದ ಕಾಲೇಜುಗಳಲ್ಲಿ ಸಂಘರ್ಷಕ್ಕೆ ಕಾರಣವಾಗಿದ್ದ ಹಿಜಾಬ್ ವಿವಾದದ ತೀರ್ಪು ಇಂದು ಹೊರ ಬಿದ್ದಿದ್ದು, ಇದೀಗ ತೀರ್ಪು ಪ್ರಕಟಿಸುವ ಮೂಲಕ ಹಿಜಾಬ್ ಸಂಬಂಧ ಎಲ್ಲ ರಿಟ್ ಅರ್ಜಿಗಳನ್ನೂ ವಜಾಗೊಳಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ತಾಜ್ ವೆಸ್ಟೆಂಡ್ ನಲ್ಲಿ ರಾಸಲೀಲೆ ಮಾಡಲು ಹೋಗ್ತಿರಲಿಲ್ಲ: ಸಿ.ಪಿ.ಯೋಗೇಶ್ವರ್ಗೆ ಎಚ್.ಡಿ.ಕುಮಾರಸ್ವಾಮಿ ತಿರುಗೇಟು
ಇಂದು ಹಿಜಾಬ್ ತೀರ್ಪು: ಉಡುಪಿ, ದ.ಕ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳಿಂದ ಮಹಿಳೆಯ ಮಂಗಲ್ಯ ಸರ ಅಪಹರಣ
ಸಿಎಂ ಇಬ್ರಾಹಿಂಗೆ ದುರಾಸೆ ಹೆಚ್ಚಾಗಿ ಕಾಂಗ್ರೆಸ್ ಪಕ್ಷ ಬಿಟ್ಟು ಹೋಗಿದ್ದಾರೆ: ಮಾಜಿ ಸಿಎಂ ಸಿದ್ದರಾಮಯ್ಯ