ವಿವಾಹ ವಾರ್ಷಿಕೋತ್ಸವದಂದೇ ನಿಖಿಲ್ ಗೆ ಕೊರೊನಾ ಪಾಸಿಟಿವ್ | ಏನಂದ್ರು ನಿಖಿಲ್?

nikhil kumaraswamy
17/04/2021

ಬೆಂಗಳೂರು: ಸ್ಯಾಂಡಲ್ ವುಡ್ ನಟ ನಿಖಿಲ್ ಕುಮಾರಸ್ವಾಮಿ ಅವರಿಗೆ ಕೂಡ ಕೊರೊನಾ ಪಾಸಿಟಿವ್ ವರದಿ ಬಂದಿದ್ದು, ತಮ್ಮ ವಿವಾಹ ವಾರ್ಷಿಕೋತ್ಸವ ಸಂಭ್ರಮದ ದಿನದಂದೇ ಅವರಿಗೆ ಕೊರೊನಾ ಪಾಸಿಟಿವ್ ವರದಿ ಲಭಿಸಿದೆ.

ಲೇಹ್-ಲಡಾಖ್ ನಲ್ಲಿ ತಮ್ಮ ಸಿನಿಮಾದ ಹಾಡಿನ ಚಿತ್ರೀಕರಣ ಮಾಡುತ್ತಿದ್ದ ಅವರು, ಚಿತ್ರದ ಫೋಟೋಗಳನ್ನು, ವಿಡಿಯೋಗಳನ್ನು ಶೇರ್ ಮಾಡಿಕೊಂಡಿದ್ದರು. ನಿಖಿಲ್ ಅವರ ತಂದೆ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದ ಬೆನ್ನಲ್ಲೇ ನಿಖಿಲ್ ಗೆ ಕೂಡ ಕೊರೊನಾ ಪಾಸಿಟಿವ್ ಬಂದಿದೆ.

ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ ಎಂದು ನಿಖಿಲ್ ಟ್ವೀಟ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

Exit mobile version