ವೀಕೆಂಡ್ ಕರ್ಫ್ಯೂ ಸಡಿಲಿಕೆ ಬಗ್ಗೆ ಶುಕ್ರವಾರ ನಿರ್ಧಾರ: ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಶುಕ್ರವಾರ ಮತ್ತೆ ತಜ್ಞರ ಜೊತೆ ಸಭೆ ಮಾಡಿ ಹಾಲಿ ನಿರ್ಬಂಧಗಳ ಪುನರ್ ಪರಿಶೀಲನೆ ಮಾಡುತ್ತೇವೆ. ತಜ್ಞರ ಅಭಿಪ್ರಾಯದಂತೆ ವೀಕೆಂಡ್ ಕರ್ಫ್ಯೂ ಸಡಿಲಿಕೆ ಬಗ್ಗೆ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ. ಲಸಿಕೆ ಬಗ್ಗೆ ವಿಶೇಷ ಗಮನ ಕೊಡಲು ಸೂಚಿಸಿದ್ದೇನೆ. ಫೆಬ್ರವರಿಯಲ್ಲಿ ಕೋವಿಡ್ ಹೆಚ್ಚಾಗುತ್ತೆ ಎಂದು ತಜ್ಞರು ಅಂದಾಜು ಮಾಡಿದ್ದಾರೆ. ತಜ್ಞರ ಅಭಿಪ್ರಾಯದಂತೆ ವೀಕೆಂಡ್ ಕರ್ಫ್ಯೂ ಸಡಿಲಿಕೆ ಬಗ್ಗೆ ನಿರ್ಧರಿಸಲಾಗುವುದು ಎಂದರು.
ನಿಯಮ ಉಲ್ಲಂಘಿಸಿದ ಬಿಜೆಪಿಗರ ವಿರುದ್ಧ ಕ್ರಮದ ವಿಚಾರವಾಗಿ ಮಾತನಾಡಿ, ಯಾರೇ ರೂಲ್ಸ್ ಬ್ರೇಕ್ ಮಾಡಿದ್ರೂ ಕ್ರಮ ಕೈಗೊಳ್ಳುತ್ತೇವೆ. ನಮ್ಮ ಪಕ್ಷದವರು, ಬೇರೆಯವರು ಅಂತ ನೋಡದೇ ಕ್ರಮ ಕೈಗೊಳ್ಳುತ್ತೇವೆ. ಈ ಬಗ್ಗೆ ಸಿ.ಎಸ್.ರವಿಕುಮಾರ್ ಗೆ ಸೂಚನೆ ನೀಡಿದ್ದೇನೆ. ಕಾಂಗ್ರೆಸ್ ನವರು ದೂರು ಕೊಡುವ ಅಗತ್ಯವಿಲ್ಲ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ನಾರಾಯಣ ಗುರುಗಳ ಸ್ತಬ್ಧಚಿತ್ರ ವಿವಾದ : ಸಿದ್ದರಾಮಯ್ಯ ಕಿಡಿ
ಮಂಗಳೂರು: ತ್ಯಾಜ್ಯ ವಿಲೇವಾರಿ ವಿಳಂಬ; ಪಾಲಿಕೆ ಆಯುಕ್ತರಿಗೆ ಹೈಕೋರ್ಟ್ ಎಚ್ಚರಿಕೆ
ಕೋವಿಡ್ ಲಸಿಕೆ ಸಾವು ತಪ್ಪಿಸುತ್ತದೆಯೇ ಹೊರತು ಸೋಂಕು ಬರುವುದನ್ನಲ್ಲ: ಸಚಿವ ಡಾ. ಸುಧಾಕರ್