ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಹೊಂಚು ಹಾಕುತ್ತಿದ್ದ: 10 ರೂಪಾಯಿ ಕೊಟ್ಟು ಬಾಲಕಿಯ ಅತ್ಯಾಚಾರ ಮಾಡುತ್ತಿದ್ದವ ಅಂದರ್

ವ್ಯಕ್ತಿಯೊಬ್ಬ ಬಾಲಕಿ ಮೇಲೆ ಸುಮಾರು ಒಂದು ತಿಂಗಳ ಕಾಲ ಅತ್ಯಾಚಾರ ಮಾಡಿದ ಘಟನೆ ಭಾರತ- ನೇಪಾಳ ಗಡಿ ಬಳಿಯ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ಖೋರಿಬರಿ ಪ್ರದೇಶದಲ್ಲಿ ನಡೆದಿದೆ.
ಸಂತ್ರಸ್ತೆ 5 ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಾಳೆ. ಈ ಕುರಿತು ವಿದ್ಯಾರ್ಥಿನಿಯು ತನ್ನ ತಾಯಿಗೆ ವಿವರಿಸಿದ ನಂತರ ಘಟನೆ ಬೆಳಕಿಗೆ ಬಂದಿದೆ. ಬಾಲಕಿ ತನ್ನ ಮನೆಯಲ್ಲಿ ಒಬ್ಬಳೇ ಇದ್ದಾಗ ಈ ಕೃತ್ಯ ನಡೆದಿವೆ. ಸ್ಥಳೀಯ ನಿವಾಸಿಯಾದ 68 ವರ್ಷದ ಆರೋಪಿಯು ಆಕೆಯ ಮನೆಗೆ ಬಂದು ಸುಮಾರು ಒಂದು ತಿಂಗಳ ಕಾಲ ಅತ್ಯಾಚಾರವೆಸಗಿ ಪ್ರತೀ ಬಾರಿ ಆಕೆಗೆ 10 ರೂಪಾಯಿ ನೀಡಿ ಹೋಗುತ್ತಿದ್ದ. ಅಷ್ಟೇ ಅಲ್ಲದೇ, ಈ ಬಗ್ಗೆ ಯಾರಿಗಾದರೂ ತಿಳಿಸಿದರೇ ಕತ್ತು ಹಿಸುಕಿ ಸಾಯಿಸುವುದಾಗಿ ಬೆದರಿಕೆ ಹಾಕಿದ್ದ ಎಂಬ ಆರೋಪ ಕೇಳಿ ಬಂದಿದೆ.
ಈ ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಗೆ ಬಾಲಕಿಯ ತಾಯಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ಆರಂಭಿಸಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.