ವೆಸ್ಟ್ ನೈಲ್ ಜ್ವರ ವ್ಯಕ್ತಿ ಸಾವು: ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮ
ತ್ರಿಶೂರ್: ಕೇರಳದ ತ್ರಿಶೂರ್ ನಲ್ಲಿ ವೆಸ್ಟ್ ನೈಲ್ ಜ್ವರದಿಂದ ಮಧ್ಯವಯಸ್ಕರೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಪುತ್ತೂರು ಆಶಾರಿಕೋಡಿನ ಜೋಬಿ (47) ಎಂದು ಗುರುತಿಸಲಾಗಿದೆ.
ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದರು ಆದರೆ, ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದು, ವೆಸ್ಟ್ ನೈಲ್ ಜ್ವರದಿಂದ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ವೆಸ್ಟ್ ನೈಲ್ ಜ್ವರವು ಸೊಳ್ಳೆಗಳಿಂದ ಹರಡುವ ರೋಗವಾಗಿದೆ. ಮೃತ ಜೋಬಿಯಿಂದ ಸದ್ಯ ಬೇರೆಯವರಿಗೆ ರೋಗ ಹರಡಿಲ್ಲ. ವೆಸ್ಟ್ ನೈಲ್ ಕಾಯಿಲೆ ದೃಢಪಟ್ಟ ನಂತರ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.
ಹೆಚ್ಚಿನ ಜನರನ್ನು ಪರಿಶೀಲಿಸುತ್ತಿದ್ದು,ಜಿಲ್ಲಾ ವೈದ್ಯಾಧಿಕಾರಿ ನೇತೃತ್ವದ ತಂಡ ನಿನ್ನೆ ಸ್ಥಳಕ್ಕೆ ಭೇಟಿ ನೀಡಿತ್ತು. ಈ ಪ್ರದೇಶದಲ್ಲಿ ಕ್ಯೂಲೆಕ್ಸ್ ಸೊಳ್ಳೆಗಳಿರುವುದು ಪತ್ತೆಯಾಗಿದೆ. ಕಳೆದ ತಿಂಗಳ 17ರಂದು ಜೋಬಿಗೆ ಕಾಯಿಲೆ ಇರುವುದು ಪತ್ತೆಯಾಗಿತ್ತು. ನಂತರ ಅವರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ನಾಲ್ವರು ಭಾರತೀಯರ ಸಹಿತ 22 ಪ್ರಯಾಣಿಕರನ್ನು ಹೊತ್ತು ಸಾಗಿದ್ದ ವಿಮಾನ ನಾಪತ್ತೆ!
19 ದಿನಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ಸಾವು: ವೈದ್ಯರ ನಿರ್ಲಕ್ಷ್ಯದ ಆರೋಪ
ಕಾಂಗ್ರೆಸ್ ಪಕ್ಷ ತೊರೆದ ನಟ ಮುಖ್ಯಮಂತ್ರಿ ಚಂದ್ರು: ಕಾರಣ ಏನು?
ಮಹಿಳೆಯರು ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವಂತಿಲ್ಲ: ಯೋಗಿ ಸರ್ಕಾರದಿಂದ ಖಡಕ್ ಆದೇಶ