ಚಿತ್ರರಂಗದಿಂದ ದರ್ಶನ್ ಬ್ಯಾನ್ ವಿಚಾರಕ್ಕೆ ಕಿಚ್ಚ ಸುದೀಪ್ ಹೇಳಿದ್ದೇನು?

ಬೆಂಗಳೂರು: ರೇಣುಕಾಸ್ವಾಮಿ ಕುಟುಂಬಕ್ಕೆ, ಅವ್ರ ಪತ್ನಿ, ಮಗುವಿಗೆ ನ್ಯಾಯ ಸಿಗಬೇಕು ಎಂದು ನಟ ಕಿಚ್ಚ ಸುದೀಪ್ ಒತ್ತಾಯಿಸಿದ್ದಾರೆ.
ನಟ ದರ್ಶನ್ ಹಾಗೂ ತಂಡದಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಅವರ ಪರ ಇವರ ಪರ ಮಾತಾಡೋದಿಲ್ಲ. ಒಟ್ಟಿನಲ್ಲಿ ರೇಣುಕಾಸ್ವಾಮಿ ಕುಟುಂಬಕ್ಕೆ, ಅವ್ರ ಪತ್ನಿ, ಮಗುವಿಗೆ ನ್ಯಾಯ ಸಿಗಬೇಕು ಎಂದಿದ್ದಾರೆ.
ದರ್ಶನ್ ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡುವ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಬ್ಯಾನ್ ಮಾಡಲು ನಾವ್ಯಾರು ಕಾನೂನು ಅಲ್ಲ. ಕೇಸ್ ನಿಂದ ಹೊರಗೆ ಬಂದ್ರೆ ಬ್ಯಾನ್ ಅನ್ನೋದು ಬರೋದೆ ಇಲ್ಲ. ಇಲ್ಲಿ ಬ್ಯಾನ್ ಅನ್ನೋದಕ್ಕಿಂತ ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಸಿಗಬೇಕಿದೆ. ಕೆಲ ವಾರಗಳ ಹಿಂದೆಯಷ್ಟೇ ನನ್ನ ಮೇಲೂ ಬ್ಯಾನ್ ಎಂಬ ಕೂಗು ಕೇಳಿಬಂದಿತ್ತು. ಹಾಗಾಗಿ ಬ್ಯಾನ್ ಮಾಡೋದು ಮುಖ್ಯ ಅಲ್ಲ ನ್ಯಾಯ ಅನ್ನೋದು ಮುಖ್ಯ ಎಂದು ಹೇಳಿದ್ದಾರೆ.
ಪೊಲೀಸರು, ಮಾಧ್ಯಮಗಳು ಹೇಗೆ ಕೆಲಸ ಮಾಡ್ತಿವೆಕೋರ್ಟ್‌ನಲ್ಲಿ ಏನಾಗ್ತಿದೆ ಅನ್ನೋದರ ಬಗ್ಗೆ ಎಲ್ಲರೂ ದುರ್ಬೀನು ಹಾಕಿಕೊಂಡು ನೋಡ್ತಿದ್ದಾರೆ. ಗಮನ ಅಲ್ಲಿರಬೇಕು ಇಂತಹ ವಿಚಾರದಲ್ಲಿ ಪರ ವಿರೋಧ ಮಾತನಾಡುವುದು ತಪ್ಪಾಗುತ್ತದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಾಧ್ಯಮಗಳಲ್ಲಿ ಏನು ತೋರಿಸುತ್ತಿದ್ದೀರೋ ಅದರಿಂದಲೇ ನಾನು ತಿಳಿದುಕೊಳ್ಳುತ್ತಿದ್ದೇನೆ. ಸತ್ಯಾಂಶ ಹೊರತರಬೇಕು ಅನ್ನೋ ನಿಟ್ಟಿನಲ್ಲಿ ಮಾಧ್ಯಮಗಳು, ಪೊಲೀಸರು ತುಂಬಾ ಒಳ್ಳೆ ಕೆಲಸ ಮಾಡುತ್ತಿದ್ದಾರೆ. ಸಿಎಂ ಅವರು ಹಠ ಹಿಡಿದು ಕುಳಿತಿದ್ದಾರೆ ಅಂದ್ರೆ, ಎಲ್ಲರೂ ಸರಿಯಾದ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: