ಫ್ಲೈಟ್ ನಲ್ಲಿ ತೇಜಸ್ವಿ ಸೂರ್ಯ ಮಾಡಿದ್ದೇನು?: ಅಣ್ಣಾಮಲೈ ಸ್ಪಷ್ಟನೆ
ಚಿಕ್ಕಮಗಳೂರು: ಸಂಸದ ತೇಜಸ್ವಿ ಸೂರ್ಯ ಫ್ಲೈಟ್ ಎಮರ್ಜೆನ್ಸಿ ಡೋರ್ ಓಪನ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ತೇಜಸ್ವಿ ಸೂರ್ಯ ನಡೆಯನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಸಮರ್ಥಿಸಿಕೊಂಡರು.
ತೇಜಸ್ವಿ ಸೂರ್ಯ ಡೋರ್ ಓಪನ್ ಮಾಡಿಲ್ಲ, ಅದನ್ನ ರೊಟೇಟ್ ಮಾಡಿ ಓಪನ್ ಮಾಡ್ಬೇಕು, ಸಂಸದ, ಬುದ್ಧಿವಂತ, ಜವಾಬ್ದಾರಿ ಸ್ಥಾನದಲ್ಲಿದ್ದಾರೆ ಅವರು ಡೋರ್ ಓಫನ್ ಮಾಡಿಲ್ಲ , ಅವರು ಕೂತಿದ್ದು ಎಮರ್ಜೆನ್ಸ್ ಎಕ್ಸಿಟ್ ಸೀಟಿನಲ್ಲಿ, ಎಟಿಆರ್ ಫ್ಲೈಟ್ ಸೀಟಲ್ಲಿ ಹ್ಯಾಂಡ್ ರೆಸ್ಟ್ ಇರಲ್ಲ. ಅಲ್ಲಿ ಎಕ್ಸಿಟ್ ಡೋರ್ ನಲ್ಲಿ ಬ್ಲಿಡಿಂಗ್ ಸ್ವಲ್ಪ ಓಪನ್ ಇತ್ತು, ಅದನ್ನ ಏರ್ ಹಾಸ್ಟೆಸ್ ಗಮನ ತಂದ್ರು, ಪೈಲೆಟ್ ಬಂದು ಡಿಬೋರ್ಡಿಂಗ್ ಮಾಡಿ, ಸರಿಯಾಗಿ ಫಿಟ್ ಮಾಡಿದ್ರು, ಅಲ್ಲಿ ತೇಜಸ್ವಿ ಇನ್ಸಟೆಂಟ್ ರಿಪೋರ್ಟ್ ಕೊಟ್ರು ಎಂದರು.
ತೇಜಸ್ವಿ ಸೂರ್ಯ ಡೋರ್ ನ ಪುಲ್ ಮಾಡಿಲ್ಲ, ತೇಜಸ್ವಿ ಸೂರ್ಯ ಇತರೇ ಪ್ಯಾಸೆಂಜರ್‍ಗೆ ಕ್ಷಮೆ ಕೋರಿದ್ದಾರೆ ಇಂಡಿಗೋ ಅವರೇ ಕ್ಲಾರಿಫಿಕೇಶನ್ ಮಾಡಿ, ಇನ್ಸಟೆಂಟ್ ರಿಪೋರ್ಟ್ ಬಿಡುಗಡೆ ಮಾಡಿದ್ದಾರೆ ಎಂದು ಅಣ್ಣಾಮಲೈ ಹೇಳಿದರು.
ಕರ್ನಾಟಕ ಕಾಂಗ್ರೆಸ್ ಗೆ ಮಾತನಾಡಲು ಬೇರೆ ವಿಷಯ ಇಲ್ಲ, ಇಂತಹಾ ವಿಷಯವನ್ನ ಮಾತನಾಡ್ತಿದ್ದಾರೆ ಎಂದು ಇದೇ ವೇಳೆ ಅಣ್ಣಾಮಲೈ ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw