ಸಹೋದರಿ ಮನೆಯಿಂದ ಪೀಡಿಸಿ ಕರೆತಂದಿದ್ದರು: ಓಂ ಪ್ರಕಾಶ್‌ ಹತ್ಯೆಯ ಬಗ್ಗೆ ಪುತ್ರ ಕಾರ್ತಿಕೇಶ್‌ ನೀಡಿದ ದೂರಿನಲ್ಲೇನಿದೆ? - Mahanayaka

ಸಹೋದರಿ ಮನೆಯಿಂದ ಪೀಡಿಸಿ ಕರೆತಂದಿದ್ದರು: ಓಂ ಪ್ರಕಾಶ್‌ ಹತ್ಯೆಯ ಬಗ್ಗೆ ಪುತ್ರ ಕಾರ್ತಿಕೇಶ್‌ ನೀಡಿದ ದೂರಿನಲ್ಲೇನಿದೆ?

om prakash
21/04/2025

ಬೆಂಗಳೂರು: ಮಾಜಿ ಡಿಜಿ ಓಂ ಪ್ರಕಾಶ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ರ ಕಾರ್ತಿಕೇಶ್‌ ನೀಡಿದ ದೂರಿನ ಮೇರೆಗೆ ತಾಯಿ ಪಲ್ಲವಿ ಹಾಗೂ ಸಹೋದರ ಕೃತಿ ವಿರುದ್ಧ ಹೆಚ್‌ ಎಸ್‌ ಆರ್‌ ಲೇಔಟ್‌ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಎಫ್ ಐಆರ್ ದಾಖಲಾಗುತ್ತಿದ್ದಂತೆಯೇ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.


Provided by

ಕಳೆದ ಒಂದು ವಾರದಿಂದ ತಾಯಿ ಪಲ್ಲವಿ ತಂದೆಗೆ ಕೊಲೆ ಬೆದರಿಕೆ ಹಾಕುತ್ತಿದ್ದರು. ಕೊಲೆ ಬೆದರಿಕೆ ಹಾಕುತ್ತಿದ್ದರಿಂದ ಅವರ ಸಹೋದರಿ ಸರಿತಾ ಮನೆಗೆ ತಂದೆ ಹೋಗಿದ್ದರು. ಎರಡು ದಿನಗಳ ಹಿಂದೆ ಕೃತಿ  ಸರಿತಾ ಅವರ ಮನೆಗೆ ಹೋಗಿ ಪೀಡಿಸಿ ಕರೆ ತಂದಿದ್ದಳು ಎಂದು ದೂರಿನಲ್ಲಿ ಪುತ್ರ ತಿಳಿಸಿದ್ದಾರೆ.

ಏ.20ರ ಸಂಜೆ 5 ಗಂಟೆಯ ವೇಳೆ ನಾನು ದೊಮ್ಮಲೂರಿನಲ್ಲಿರುವ ಗಾಲ್ಫ್‌ ಅಸೋಸಿಯೇಷನ್‌ ನಲ್ಲಿ ಇದ್ದಾಗ ನಮ್ಮ ಮನೆಯ ಪಕ್ಕದ ಮನೆಯವರು ಕರೆ ಮಾಡಿ ನಿಮ್ಮ ತಂದೆಯ ದೇಹ ಕೆಳಗಡೆ ಬಿದ್ದಿರುತ್ತದೆ ಎಂದು ತಿಳಿಸಿದರು.  ಕೂಡಲೇ ದೊಮ್ಮಲೂರಿನಿಂದ ಹೊರಟು ಸಂಜೆ 5:45ಕ್ಕೆ ಮನೆಗೆ ಆಗಮಿಸಿದೆ. ಈ ವೇಳೆ ಸ್ಥಳದಲ್ಲಿ ಪೊಲೀಸರು ಮತ್ತು ಸಾರ್ವಜನಿಕರು ಇದ್ದರು. ತಂದೆಯ ತಲೆಯಿಂದ ರಕ್ತ ಬರುತ್ತಿತ್ತು. ದೇಹದ ಪಕ್ಕದಲ್ಲಿ ಬಾಟಲ್‌ ಮತ್ತು ಚಾಕು ಇತ್ತು ಎಂದು ತಿಳಿಸಿದ್ದಾರೆ.

ನನ್ನ ತಾಯಿ ಪಲ್ಲವಿ ಮತ್ತು ತಂಗಿ ಕೃತಿ ಖಿನ್ನತೆಯಿಂದ ಬಳಲುತ್ತಿದ್ದು ಅವರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಅವರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ದೂರಿನಲ್ಲಿ ಪುತ್ರ ಕಾರ್ತಿಕೇಶ್‌ ಒತ್ತಾಯಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ