ನೇಜಾರಿನಲ್ಲಿ ಹತ್ಯೆ ಪ್ರಕರಣ: ದುಷ್ಕರ್ಮಿಯ ದಾಳಿಯಿಂದ ಗಾಯಗೊಂಡಿದ್ದ ಹಾಜಿರಾ ಅವರ ಸ್ಥಿತಿ ಹೇಗಿದೆ?
ಉಡುಪಿ: ನೇಜಾರಿನಲ್ಲಿ ತಾಯಿ ಮಕ್ಕಳ ಹತ್ಯೆ ಸಂದರ್ಭ ದುಷ್ಕರ್ಮಿಯಿಂದ ಇರಿತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮೃತ ಹಸೀನಾ ಅವರ ಅತ್ತೆ ಹಾಜಿರಾ(70) ಇಂದು ಮಣಿಪಾಲ ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ.
ಹೊಟ್ಟೆಯ ಎಡಭಾಗಕ್ಕೆ ಇರಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಹಾಜಿರಾ ಮಣಿಪಾಲ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚೇತರಿಸಿಕೊಂಡಿರುವ ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ಮರಳಿದ್ದಾರೆಂದು ತಿಳಿದುಬಂದಿದೆ.
ನಾಲ್ವರನ್ನು ಹತ್ಯೆಗೈದ ಹಂತಕನಿಂದ ಚೂರಿ ಇರಿತಕ್ಕೆ ಒಳಗಾಗಿದ್ದ ಹಾಜಿರಾ ಬಳಿಕ ತಪ್ಪಿಸಿಕೊಂಡು ಶೌಚಾಲಯದೊಳಗೆ ತೆರಳಿ ಬಾಗಿಲು ಹಾಕಿಕೊಂಡಿದ್ದರು. ಪ್ರಕರಣ ಬೆಳಕಿಗೆ ಬಂದ ನಂತರ ಆಗಮಿಸಿದ ಪೊಲೀಸರು ಶೌಚಾಲಾಯದ ಬಾಗಿಲು ಮುರಿದು ಹಾಜಿರಾರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು.
ಇದನ್ನೂ ಓದಿ:
ಇದನ್ನೂ ಓದಿ:
ನೇಜಾರುನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ: ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯೆ
ಇದನ್ನೂ ಓದಿ:
ಉಡುಪಿ: ಹತ್ಯೆಗೀಡಾದವರ ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗರ: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ