ಆಪರೇಷನ್ ಸೈನಿಕ ಯಶಸ್ವಿ: ಸಿ.ಪಿ.ಯೋಗೇಶ್ವರ್ ಕೈ ಹಿಡಿಸಲು ಕಾಂಗ್ರೆಸ್ ನಾಯಕರು ನಡೆಸಿದ ಕಸರತ್ತು ಏನು? - Mahanayaka
12:38 PM Wednesday 23 - October 2024

ಆಪರೇಷನ್ ಸೈನಿಕ ಯಶಸ್ವಿ: ಸಿ.ಪಿ.ಯೋಗೇಶ್ವರ್ ಕೈ ಹಿಡಿಸಲು ಕಾಂಗ್ರೆಸ್ ನಾಯಕರು ನಡೆಸಿದ ಕಸರತ್ತು ಏನು?

C P Yogeshwar
23/10/2024

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಗೃಹಕಚೇರಿ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಸಿ.ಪಿ.ಯೋಗೇಶ್ವರ್ ಅವರ ಮನವೊಲಿಸಿ ಕಾಂಗ್ರೆಸ್ ಪಾಳೆಯದತ್ತ ಕರೆತರಲು ದೊಡ್ಡ ದಂಡೇ ಬಿರುಸಿನ ಕಾರ್ಯಾಚರಣೆ ನಡೆಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರ ಮಾರ್ಗದರ್ಶನದಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್, ಸಚಿವರಾದ ಚೆಲುವರಾಯಸ್ವಾಮಿ, ಜಮೀರ್ ಅಹಮದ್ ಖಾನ್, ಮಂಡ್ಯದ ಶಾಸಕ ಉದಯ್ ಬಿರುಸಿನ ಕಾರ್ಯಾಚರಣೆ ನಡೆಸಿದರು.

ಇಂದು ಬೆಳಿಗ್ಗೆ ಡಿ.ಕೆ.ಶಿವಕುಮಾರ್ ರವರ ಮನೆಗೆ ಸಿ.ಪಿ.ಯೋಗೇಶ್ವರ್ ಆಗಮಿಸಿದರು. ಅಲ್ಲಿಂದ ಒಂದೇ ಕಾರಿನಲ್ಲಿ ಸಿ.ಪಿ.ಯೋಗೇಶ್ವರ್ ರವರನ್ನು ಕೂರಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೆರಳಿದರು. ಅಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾದ ಬಳಿಕ ಸಿ.ಪಿ.ಯೋಗೇಶ್ವರ್ ಕಾಲಿಗೆ ಬಿದ್ದು, ಕೈ ಕುಲುಕಿ ಆಶೀರ್ವಾದ ಪಡೆದುಕೊಂಡರು.

ಸಿ.ಪಿ.ಯೋಗೇಶ್ವರ್ ರವರನ್ನು ಸೆಳೆಯಲು ಸಮಾಜವಾದಿ ಪಕ್ಷ, ಬಿಎಸ್ ಪಿ ಹರಸಾಹಸ ನಡೆಸಿದ್ದರು. ಬಿಜೆಪಿ ನಾಯಕರು ಕೂಡ ತಮ ಪಕ್ಷದಲ್ಲೇ ಉಳಿಸಿಕೊಳ್ಳಲು ನಾನಾ ರೀತಿಯ ತಂತ್ರಗಾರಿಕೆ ನಡೆಸಿದ್ದರು. ಆದರೆ ಇದೆಲ್ಲದಕ್ಕೂ ಮೀರಿ ಡಿ.ಕೆ.ಶಿವಕುಮಾರ್ ರಣಬಲೆಯನ್ನೇ ಹೆಣೆದಿದ್ದರು.

ಈ ಮೊದಲು ವಿಧಾನಸಭೆಯ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯ ಜಗದೀಶ್ ಶೆಟ್ಟರ್ ರವರನ್ನು ಕಾಂಗ್ರೆಸ್‌‍ಗೆ ಸೆಳೆದುಕೊಳ್ಳಲು ಇದೇ ರೀತಿಯ ರಣತಂತ್ರ ರೂಪಿಸಲಾಗಿತ್ತು. ಬಿಜೆಪಿಯ ಲಕ್ಷ್ಮಣ್ ಸವದಿಯವರನ್ನು ಕೂಡ ಕರೆತರಲು ಅಷ್ಟೇ ಚುರುಕಿನ ಕಾರ್ಯಾಚರಣೆ ನಡೆಸಿದ್ದರು. ಕೊನೆ ಕ್ಷಣದವರೆಗೂ ಗುಟ್ಟು ಬಿಟ್ಟುಕೊಡದೆ ನಮಗೂ, ಅದಕ್ಕೂ ಸಂಬಂಧವಿಲ್ಲ ಎಂಬಂತೆ ವರ್ತಿಸುವ ಮೂಲಕ ತಮ ಗುರಿಯನ್ನು ಸಾಧಿಸುವಲ್ಲಿ ಡಿ.ಕೆ.ಶಿವಕುಮಾರ್ ಯಶಸ್ವಿಯಾಗಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ