ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸಾಪ್ ಸಂದೇಶ ಕಳುಹಿಸಿ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ನಾಪತ್ತೆ!
![missing](https://www.mahanayaka.in/wp-content/uploads/2021/09/missing.jpg)
ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಯೊಬ್ಬರು ಆತ್ಮಹತ್ಯೆಯ ವಾಟ್ಸಾಪ್ ಮೆಸೇಜ್ ಕಳುಹಿಸಿ ನಾಪತ್ತೆಯಾಗಿರುವ ಘಟನೆ ನಡೆದಿದ್ದು, ಇದರಿಂದಾಗಿ ಅವರ ಕುಟುಂಬಸ್ಥರು ಹಾಗೂ ಕಚೇರಿ ಸಿಬ್ಬಂದಿ ತೀವ್ರವಾಗಿ ಆತಂಕಕ್ಕೀಡಾಗಿದ್ದಾರೆ. ಮಂಗಳವಾರ ಬೆಳಗ್ಗಿನ ಜಾವ ನಾಪತ್ತೆಯಾಗಿದ್ದ ಅವರನ್ನು ತೀವ್ರವಾಗಿ ಹುಡುಕಾಟ ನಡೆಸಲಾಗುತ್ತಿದೆ.
ಜಿಲ್ಲಾಧಿಕಾರಿ ಕಚೇರಿಯ ಪ್ರಥಮ ದರ್ಜೆಯ ಸಹಾಯಕ 39 ವರ್ಷ ವಯಸ್ಸಿನ ಗಿರಿರಾಜ್ ನಾಪತ್ತೆಯಾಗಿರುವವರಾಗಿದ್ದಾರೆ. ಬೆಳಗ್ಗಿನ ಜಾವ ಅವರು ಮನೆಯಿಂದ ಹೊರಟು ಹೋಗಿದ್ದು, ತಮ್ಮ ವಾಹನವನ್ನು ಕೂಡ ಕೊಂಡೊಯ್ದಿಲ್ಲ ಎನ್ನಲಾಗಿದೆ.
ಇನ್ನೂ ಗಿರಿರಾಜ್ ಅವರು ಕಚೇರಿ ಸಿಬ್ಬಂದಿಯೋರ್ವರಿಗೆ ವಾಟ್ಸಾಪ್ ನಲ್ಲಿ ಮೆಸೆಜ್ ಕಳುಹಿಸಿದ್ದು, ಕಚೇರಿಯ ಕಾರ್ಯದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆನ್ನಲಾಗಿದೆ. ಈ ಮೆಸೇಜ್ ಸಿಕ್ಕಿದ ಬಳಿಕ ಜಿಲ್ಲಾಧಿಕಾರಿ ಕಚೇರಿಯ ಇತರ ಸಿಬ್ಬಂದಿ ಗಿರಿರಾಜ್ ಗಾಗಿ ಹುಡುಕಾಟ ಆರಂಭಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj
ಇನ್ನಷ್ಟು ಸುದ್ದಿಗಳು…
ಸಿಪಿಐನಿಂದ ಕಾಂಗ್ರೆಸ್ ಗೆ ಹೋಗುವಾಗ ಸಿಪಿಐ ಕಚೇರಿಯ ಎಸಿಯನ್ನೂ ಕೊಂಡೊಯ್ದ ಕನ್ಹಯ್ಯಾ!
ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಅಪರಿಚಿತ ವಾಹನ | ನರ್ಸಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು
ಕಡಬ: ಯುವತಿಯ ಮೇಲೆ ಅತ್ಯಾಚಾರ, ಗರ್ಭಪಾತ | ಕಾನ್ ಸ್ಟೇಬಲ್ ಅರೆಸ್ಟ್
ಅಪೌಷ್ಟಿಕತೆ ನಿರ್ಮೂಲನೆ ಪೌಷ್ಟಿಕಾಂಶ ಮಾಸಾಚರಣೆ ಅಭಿಯಾನದ ಮುಖ್ಯ ಗುರಿ | ಲಾಲಸಾಬ್ ಪೀರಾಪುರ
ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಅನೈತಿಕ ಗೂಂಡಾಗಿರಿ: ಕಠಿಣ ಕಾನೂನು ಕ್ರಮಕ್ಕೆ ಡಿವೈಎಫ್ ಐ ಒತ್ತಾಯ
ಕೃಷಿ ಸಚಿವ ಬಿ.ಸಿ.ಪಾಟೀಲ್, ಸಚಿವೆ ಜೊಲ್ಲೆ ವಿರುದ್ಧ ತಿರುಗಿ ಬಿದ್ದ ಗೋಮಾತೆ | ಸಚಿವರಿಗೆ ತಿವಿಯಲು ಯತ್ನ
ಮಂಗಳೂರು: ಬೇರೆ ಬೇರೆ ಧರ್ಮದ ವಿದ್ಯಾರ್ಥಿಗಳು ಜೊತೆಯಾಗಿ ಪ್ರಯಾಣಿಸುತ್ತಿದ್ದ ಕಾರಿಗೆ ದಾಳಿ: ಐವರು ಕಿಡಿಗೇಡಿಗಳ ಬಂಧನ