ವಾಸ್ತು ಸರಿಯಿಲ್ಲ ಎನ್ನುವ ಕಾರಣದಿಂದ ಬಂದ್ ಮಾಡಲಾಗಿದ್ದ ವಿಧಾನಸೌಧದ ಪಶ್ಚಿಮ ದ್ವಾರ ತೆರೆಸಿದ ಮುಖ್ಯಮಂತ್ರಿಗಳು
ಅನ್ನಭಾಗ್ಯ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ಪಶ್ಚಿಮ ದ್ವಾರ ಬಂದ್ ಆಗಿರುವುದನ್ನು ಗಮನಿಸಿದರು. ವಾಸ್ತು ಕಾರಣದಿಂದ ಬಂದ್ ಮಾಡಲಾಗಿದೆ ಎನ್ನುವ ಉತ್ತರ ಅಧಿಕಾರಿಗಳಿಂದ ಬಂದ ಬಳಿಕ ಮುಖ್ಯಮಂತ್ರಿಗಳು ಆ ದ್ವಾರದಲ್ಲೇ ನಿಂತರು. ದಕ್ಷಿಣ ದ್ವಾರದಿಂದ ಸಿಬ್ಬಂದಿ ಒಳಗೆ ಹೋಗಿ ಪಶ್ಚಿಮದ ದ್ವಾರವನ್ನು ತೆರೆದ ಬಳಿಕ ಅದೇ ದ್ವಾರದ ಮೂಲಕವೇ ತಮ್ಮ ಕಚೇರಿ ಪ್ರವೇಶಿಸಿದರು.
ಆರೋಗ್ಯಕರ ಮನಸ್ಸು, ಸ್ವಚ್ಚ ಹೃದಯ, ಜನಪರ ಕಾಳಜಿ, ಒಳ್ಳೆ ಗಾಳಿ ಬೆಳಕು ಬರುವಂತಿದ್ದರೆ ಅದೇ ಉತ್ತಮ ವಾಸ್ತು ಎಂದು ಅಧಿಕಾರಿಗಳ ಜತೆ ನಮ್ಮ ನಿಲುವನ್ನು ಹಂಚಿಕೊಂಡರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw