ಅಮೆರಿಕದ ಪ್ರೆಸ್ ಮೀಟ್ ನಲ್ಲಿ ಪ್ರಧಾನಿ ಮೋದಿಗೆ ಪ್ರಶ್ನೆ ಕೇಳಿದ್ದ ಸಬ್ರಿನಾ ಸಿದ್ದಿಕಿಗೆ ನಿಂದನೆ: ದಿ ವಾಲ್ ಸ್ಟ್ರೀಟ್ ಜರ್ನಲ್ ವರದಿಗಾರ್ತಿ ಕೇಳಿದ ಪ್ರಶ್ನೆ ಏನು..?
ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಶ್ನೆ ಕೇಳಿದ್ದಕ್ಕಾಗಿ ಸಾಮಾಜಿಕ ಮಾಧ್ಯಮದಲ್ಲಿ ಅಮೆರಿಕದ ಪತ್ರಕರ್ತೆಗೆ ಕಿರುಕುಳ ನೀಡಿರುವುದು ಸ್ವೀಕಾರಾರ್ಹವಲ್ಲ ಎಂದು ಶ್ವೇತಭವನ ಖಂಡಿಸಿದೆ.
ಮೊನ್ನೆ ದಿ ವಾಲ್ ಸ್ಟ್ರೀಟ್ ಜರ್ನಲ್ ವರದಿಗಾರ್ತಿ ಸಬ್ರಿನಾ ಸಿದ್ದಿಕಿ ಅವರು ಭಾರತದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳ ಬಗ್ಗೆ ಮತ್ತು ಅವುಗಳನ್ನು ಸುಧಾರಿಸಲು ಮತ್ತು ವಾಕ್ ಸ್ವಾತಂತ್ರ್ಯವನ್ನು ಎತ್ತಿಹಿಡಿಯಲು ನಿಮ್ಮ ಸರ್ಕಾರ ಯಾವ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧವಾಗಿದೆ ಎಂದು ಪ್ರಧಾನಿ ಮೋದಿಯವರನ್ನು ಪ್ರಶ್ನಿಸಿದ್ದರು.
ಜಂಟಿ ಪತ್ರಿಕಾಗೋಷ್ಠಿ ಆದ ಒಂದು ದಿನದ ನಂತರ, ವರದಿಗಾರ್ತಿ ಪ್ರಧಾನಿಯನ್ನು ಪ್ರಶ್ನಿಸಿದ್ದಕ್ಕಾಗಿ ಆನ್ ಲೈನ್ ನಲ್ಲಿ ನಿಂದನೆಯನ್ನು ಎದುರಿಸಿದ್ದಾರೆ. ಕೆಲವರು ಅವರ ಪ್ರಶ್ನೆಯು “ಪ್ರೇರಿತ” ಎಂದು ಆರೋಪಿಸಿದ್ರೆ ಅವರನ್ನು “ಪಾಕಿಸ್ತಾನಿ ಇಸ್ಲಾಮಿಸ್ಟ್” ಎಂದು ಕರೆದಿದ್ದಾರೆ.
‘ಪತ್ರಕರ್ತೆಗೆ ನೀಡಿದ ಕಿರುಕುಳದ ಬಗ್ಗೆ ನಮಗೆ ತಿಳಿದಿದೆ. ಇದು ಸ್ವೀಕಾರಾರ್ಹವಲ್ಲ. ಯಾವುದೇ ಸಂದರ್ಭದಲ್ಲೂ ಪತ್ರಕರ್ತರಿಗೆ ಕಿರುಕುಳ ನೀಡುವುದನ್ನು ನಾವು ಸಂಪೂರ್ಣವಾಗಿ ಖಂಡಿಸುತ್ತೇವೆ. ಅದು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಮತ್ತು ಇದು ಕಳೆದ ವಾರ ರಾಜ್ಯ ಭೇಟಿಯ ಸಮಯದಲ್ಲಿ ಪ್ರದರ್ಶಿಸಲಾದ ಪ್ರಜಾಪ್ರಭುತ್ವದ ತತ್ವಗಳಿಗೆ ವಿರುದ್ಧವಾಗಿದೆ’ ಎಂದು ರಾಷ್ಟ್ರೀಯ ಭದ್ರತಾ ಮಂಡಳಿಯ ಕಾರ್ಯತಂತ್ರದ ಸಂವಹನ ಸಂಯೋಜಕ ಜಾನ್ ಕಿರ್ಬಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಸಿದ್ದಿಕಿ ಅವರ ಪ್ರಶ್ನೆಗೆ ಉತ್ತರಿಸಿದ ಪ್ರಧಾನಿ ಮೋದಿ, ಪ್ರಜಾಪ್ರಭುತ್ವ ಮತ್ತು ಅವರ ಸರ್ಕಾರದ ಕಾರ್ಯಕ್ಷಮತೆ ಮತ್ತು ಮಾನವ ಹಕ್ಕುಗಳ ಬಗ್ಗೆ ಭಾರತದ ದಾಖಲೆಯನ್ನು ಬಲವಾಗಿ ಸಮರ್ಥಿಸಿಕೊಂಡಿದ್ದರು. ತಮ್ಮ ಸರ್ಕಾರದ ಮೂಲ ಅಡಿಪಾಯ ‘ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್ ಮತ್ತು ಸಬ್ಕಾ ಪ್ರಯಾಸ್’ ಆಗಿದೆ ಎಂದಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw