ಅತೀಕ್ ಮತ್ತು ಆತನ ತಮ್ಮ ಅಶ್ರಫ್‌ ನನ್ನು ಮಾಧ್ಯಮಗಳ ಮುಂದೆ ಏಕೆ ಪರೇಡ್ ಮಾಡಲಾಯಿತು?: ಸುಪ್ರೀಂ ಕೋರ್ಟ್ ಪ್ರಶ್ನೆ - Mahanayaka

ಅತೀಕ್ ಮತ್ತು ಆತನ ತಮ್ಮ ಅಶ್ರಫ್‌ ನನ್ನು ಮಾಧ್ಯಮಗಳ ಮುಂದೆ ಏಕೆ ಪರೇಡ್ ಮಾಡಲಾಯಿತು?: ಸುಪ್ರೀಂ ಕೋರ್ಟ್ ಪ್ರಶ್ನೆ

atiq ahmad and his brother ashraf ahmad
29/04/2023

ನವದೆಹಲಿ: ಅತೀಕ್ ಮತ್ತು ಆತನ ತಮ್ಮ ಅಶ್ರಫ್‌ ನನ್ನು ಪೊಲೀಸ್ ಕಾವಲಿನಲ್ಲಿ ಆಸ್ಪತ್ರೆಗೆ ಕರೆದೊಯ್ಯುವಾಗ ಅವರನ್ನು ಮಾಧ್ಯಮಗಳ ಮುಂದೆ ಏಕೆ ಪರೇಡ್ ಮಾಡಲಾಯಿತು ಎಂದು ಉತ್ತರ ಪ್ರದೇಶ ಸರ್ಕಾರವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.


Provided by

ಉತ್ತರ ಪ್ರದೇಶದಲ್ಲಿ 2017ರಿಂದ ನಡೆದ 183 ಎನ್‌ ಕೌಂಟರ್‌ ಗಳ ಬಗ್ಗೆ ತನಿಖೆ ನಡೆಸುವಂತೆ ವಕೀಲ ವಿಶಾಲ್ ತಿವಾರಿ ಸಲ್ಲಿಸಿದ ಮನವಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದ್ದು, ಪ್ರಯಾಗರಾಜ್‌ನಲ್ಲಿ ನಡೆದ ಅತೀಕ್‌ ಮತ್ತು ಆಶ್ರಫ್ ಅವರ ಹತ್ಯೆಯ ಬಳಿಕ ಕೈಗೊಂಡ ಕ್ರಮಗಳ ಸ್ಥಿತಿಗತಿಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಬಗ್ಗೆಯೂ ವರದಿ ಸಲ್ಲಿಸುವಂತೆ ಯೋಗಿ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಅತೀಕ್‌ ಮತ್ತು ಅಶ್ರಫ್‌ ಆಸ್ಪತ್ರೆಗೆ ಕರೆದೊಯ್ಯುತ್ತಿರುವ ಮಾಹಿತಿ ಹತ್ಯೆ ಆರೋಪಿಗಳಿಗೆ ಹೇಗೆ ತಿಳಿಯಿತು? ಅವರನ್ನು ಆಸ್ಪತ್ರೆಯ ಪ್ರವೇಶ ದ್ವಾರದಿಂದಲೇ ಆಂಬುಲೆನ್ಸ್‌ನಲ್ಲಿ ಏಕೆ ಕರೆದೊಯ್ಯಲಿಲ್ಲ. ಅವರನ್ನು ಮಾಧ್ಯಮಗಳ ಮುಂದೆ ಏಕೆ ಕರೆತರಲಾಯಿತು’ ಎಂದು ಸರ್ಕಾರದ ಪರ ಹಾಜರಿದ್ದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರನ್ನು ನ್ಯಾಯಪೀಠವು ಪ್ರಶ್ನಿಸಿದೆ.


Provided by

ನ್ಯಾಯಾಲಯದ ಪ್ರಶ್ನೆಗೆ ಉತ್ತರಿಸಿದ ರೋಹಟಗಿ ಕುರಿತು ರಾಜ್ಯ ಸರ್ಕಾರ ತನಿಖೆ ನಡೆಸುತ್ತಿದೆ ಮತ್ತು ಇದಕ್ಕಾಗಿ ತ್ರಿಸದಸ್ಯ ಆಯೋಗವನ್ನು ರಚಿಸಿದೆ. ಉತ್ತರ ಪ್ರದೇಶ ಪೊಲೀಸ್ ಇಲಾಖೆಯ ವಿಶೇಷ ತನಿಖಾ ತಂಡ ಕೂಡ ಈ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

183 ಎನ್‌ ಕೌಂಟರ್‌ ಗಳ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚಿಸಬೇಕು ಹಾಗೂ ಅತೀಕ್, ಅಶ್ರಫ್ ಸಹೋದರರ ಪೊಲೀಸ್ ಕಸ್ಟಡಿ ಹತ್ಯೆಯ ಬಗ್ಗೆಯೂ ತನಿಖೆ ನಡೆಸಬೇಕು ಎಂದು ನ್ಯಾಯಪೀಠವು ಆದೇಶ ನೀಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ