ನಿಮಗೆ ಮದ್ರಸಾಗಳ ಮೇಲೆ ಮಾತ್ರ ಯಾಕೆ ಕಣ್ಣು? ಸುಪ್ರೀಂ ಕೋರ್ಟ್ ಪ್ರಶ್ನೆ - Mahanayaka
10:14 PM Wednesday 23 - October 2024

ನಿಮಗೆ ಮದ್ರಸಾಗಳ ಮೇಲೆ ಮಾತ್ರ ಯಾಕೆ ಕಣ್ಣು? ಸುಪ್ರೀಂ ಕೋರ್ಟ್ ಪ್ರಶ್ನೆ

23/10/2024

ಇತರ ಧರ್ಮಗಳ ಮಕ್ಕಳು ಧಾರ್ಮಿಕ ಅಧ್ಯಯನ ಮತ್ತು ಪುರೋಹಿತಶಾಹಿ ತರಬೇತಿಗಾಗಿ ಸೇರುವ ಸಂಸ್ಥೆಗಳಿವೆ ಹಾಗಿದ್ದೂ , “ನಿಮಗೆ ಮದ್ರಸಾಗಳ ಮೇಲೆ ಮಾತ್ರ ಏಕೆ ಕಣ್ಣು ಅಥವಾ ಕಾಳಜಿ?” ಎಂದು ಸುಪ್ರೀಂ ಕೋರ್ಟ್ ಕೇಳಿದೆ.
ಇತರ ಧರ್ಮಗಳ ಸಂಸ್ಥೆಗಳ ವಿರುದ್ಧ ಇದೇ ನಿಲುವನ್ನು ತೆಗೆದುಕೊಂಡಿದ್ದೀರಾ?” ಎಂದು ಮದ್ರಸಾ ಶಿಕ್ಷಣ ವ್ಯವಸ್ಥೆಯ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ ತೆಗೆದುಕೊಂಡ ನಿಲುವಿಗೆ ಪ್ರತಿಕ್ರಿಯೆಯಾಗಿ ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ರನ್ನೊಳಗೊಂಡ ಪೀಠವು, ಅಲಹಾಬಾದ್ ಹೈಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಕೆಯಾಗಿರುವ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿದ್ದಾಗ ಈ ಪ್ರಸಂಗ ನಡೆಯಿತು.

2004ರ ಉತ್ತರ ಪ್ರದೇಶದ ಮದರಸಾಗಳ ಕಾನೂನು ಜಾತ್ಯತೀತತೆಯ ತತ್ವಗಳನ್ನು ಉಲ್ಲಂಘಿಸುತ್ತದೆ ಎಂದಿರುವ ಅಲಹಾಬಾದ್ ಹೈಕೋರ್ಟ್, ಅದನ್ನು ಅಸಂವಿಧಾನಿಕ ಎಂದು ಘೋಷಿಸಿದೆ.

ಪ್ರಸ್ತುತ ವಿಷಯದಲ್ಲಿ ಮಧ್ಯಪ್ರವೇಶಿಸಿರುವ ಎನ್‌ಸಿಪಿಸಿಆರ್, ಮದ್ರಸಾ ವ್ಯವಸ್ಥೆಗೆ ವಿವಿಧ ಆಕ್ಷೇಪಣೆಗಳನ್ನು ಎತ್ತುವ ವರದಿಯನ್ನು ಸಲ್ಲಿಸಿದ್ದು, ಮದ್ರಸಾ ಶಿಕ್ಷಣ ವ್ಯವಸ್ಥೆಯ ಮಾನದಂಡಗಳು ಶಿಕ್ಷಣ ಹಕ್ಕು ಕಾಯ್ದೆಗೆ ಅನುಗುಣವಾಗಿಲ್ಲ” ಎಂದು ಹೇಳಿದೆ.

ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಮೂರ್ತಿ ಪರ್ದಿವಾಲಾ,“ಮದ್ರಸಾ ಪಠ್ಯಕ್ರಮವು ಧಾರ್ಮಿಕ ಬೋಧನೆಯ ಬಗ್ಗೆ ಮಾತನಾಡುತ್ತದೆಯೇ? ಧಾರ್ಮಿಕ ಬೋಧನೆ ಎಂದರೇನು? ನೀವು ಏನು ಅರ್ಥಮಾಡಿಕೊಂಡಿದ್ದೀರಿ? ನಿಮ್ಮ ವಾದದಲ್ಲಿ ‘ಧಾರ್ಮಿಕ ಭೋದನೆಗಳು’ ಎಂಬ ಪದವು ನಿಮ್ಮನ್ನು ಅತ್ತ ಸೆಳೆದಿರುವಂತೆ ಕಾಣುತ್ತಿದೆ. ಅದೇ ನಿಮ್ಮ ತಲೆಗೆ ಹೊಕ್ಕಿದೆ. ಅದಕ್ಕಾಗಿಯೇ ನೀವು ಅದರಿಂದ ಹೊರಬರುತ್ತಿಲ್ಲ. ನಿಮ್ಮ ವಾದವು ಸರಿಯಿಲ್ಲ” ಎಂದು ಛಾಟಿ ಬೀಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ