ಮೋರ್ಬಿ ಸೇತುವೆ ಅನಾಹುತಕ್ಕೆ ಕಾರಣರಾದವರ ವಿರುದ್ಧ ಈ ಕಾರಣಕ್ಕೆ ಕ್ರಮಗೊಂಡಿಲ್ವಂತೆ: ರಾಹುಲ್ ಹೇಳಿದ್ದೇನು?
ಗುಜರಾತ್ ನ ಮೊರ್ಬಿ ಪಟ್ಟಣದಲ್ಲಿ ಕಳೆದ ತಿಂಗಳು ಸಂಭವಿಸಿದ ತೂಗು ಸೇತುವೆ ಕುಸಿತದಿಂದಾದ 135 ಜನರ ಸಾವಿನ ಘಟನೆ ಹಿಂದಿರುವ ”ನಿಜವಾದ ಅಪರಾಧಿಗಳು’ ಬಿಜೆಪಿಯೊಂದಿಗೆ ಉತ್ತಮ ಸಂಬಂಧ ಹೊಂದಿರುವುದರಿಂದ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ.
ರಾಜ್ ಕೋಟ್ ನಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಘಟನೆ ಸ್ಥಳದಲ್ಲಿದ್ದ ವಾಚ್ ಮನ್ ನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಯಿತಾದರೂ, ನಿಜವಾದ ಅಪರಾಧಿಗಳ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು.
“ಮೋರ್ಬಿ ದುರಂತದ ಬಗ್ಗೆ ಪತ್ರಕರ್ತರು ನನ್ನನ್ನು ಕೇಳಿದಾಗ, ಸುಮಾರು 150 ಜನರು ಸಾವನ್ನಪ್ಪಿದ್ದಾರೆ ಮತ್ತು ಇದು ರಾಜಕೀಯ ವಿಷಯವಲ್ಲ ಮತ್ತು ಈ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ ಎಂದು ಹೇಳಿದೆ. ಆದರೆ ಅವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂಬ ಪ್ರಶ್ನೆ ಇಂದು ಉದ್ಭವಿಸುತ್ತದೆ. ಇದರ ಹಿಂದೆ ಇದ್ದವರು ಯಾರು?ಏಕೆ ಅವರ ವಿರುದ್ಧ ಎಫ್ ಐಆರ್ ದಾಖಲಾಗಿಲ್ಲ ಎಂದು ರಾಹುಲ್ ಕೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka