ಸಿದ್ದರಾಮಯ್ಯರ ಕೊಲೆಗೆ ಪ್ರಚೋದನೆ ನೀಡಿದವರ ಮೇಲೆ ಕೇಸ್ ಹಾಕಲಿಲ್ಲ ಏಕೆ?
ಟಿಪ್ಪು ಸುಲ್ತಾನ್ ಅವರನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದು ಕೊಲೆ ಮಾಡಲು ಕರೆ ನೀಡಿದ, ಪ್ರಚೋದನೆ ನೀಡಿದವರ ವಿರುದ್ಧ ಯಾಕೆ ಕೇಸ್ ಹಾಕಲಿಲ್ಲ? ಅದು ಕ್ರೈಂ ಅಲ್ಲವೇ?” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದಾರೆ.
ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪೊಲೀಸ್ ಇಲಾಖೆ ನಡೆದಕೊಂಡ ರೀತಿಯನ್ನು ನೆನಪಿಸುತ್ತ ಪೊಲೀಸ್ ಅಧಿಕಾರಿಗಳಿಗೆ ಡಿ.ಕೆ.ಶಿವಕುಮಾರ್ ಅವರು ಕ್ಲಾಸ್ ತಗೆದುಕೊಂಡಿದ್ದಾರೆ. ”ನೀವು ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ? ನಮ್ಮ ಸರ್ಕಾರದಲ್ಲಿ ಇದಕ್ಕೆ ಅವಕಾಶ ಕೊಡುವುದಿಲ್ಲ. ಮಂಗಳೂರು, ಬಿಜಾಪುರ, ಬಾಗಲಕೋಟದಲ್ಲಿ ನೀವು ಹೇಗೆ ಕೇಸರಿ ಬಟ್ಟೆ ಹಾಕೊಂಡು ಇಲಾಖೆಗೆ ಅವಮಾನ ಮಾಡಿದ್ದೀರಿ ಎನ್ನುವುದು ನಮಗೆ ಗೊತ್ತಿದೆ. ಈ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು. ದೇಶದ ಬಗ್ಗೆ ಗೌರವ ಇದ್ದರೆ ರಾಷ್ಟ್ರ ಧ್ವಜ ಹಾಕಿಕೊಂಡು ಕೆಲಸ ಮಾಡಬೇಕಿತ್ತು. ನಮ್ಮ ಸರಕಾರದಲ್ಲಿ ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ನಾವು ಬಿಡೊಲ್ಲ” ಎಂದು ಹೇಳಿದರು.
”PSI ಅಕ್ರಮದಲ್ಲಿ ಒಬ್ಬ ಎಡಿಜಿಪಿ OMRr ಪೇಪರ್ ತಿದ್ದುತ್ತಾರೆ ಅಂದರೆ ಇಲಾಖೆ ಎಷ್ಟು ಕೆಟ್ಟು ಹೋಗಿದೆ ಎನ್ನುವುದು ಅರ್ಥವಾಗುತ್ತದೆ. ಪ್ರೆಸ್ ಕಾನ್ಫರೆನ್ಸ್ ಮಾಡಿ ಪ್ರಕರಣ ಬಯಲಿಗೆ ತಂದ ಪ್ರಿಯಾಂಕ್ ಖರ್ಗೆ ಅವರಿಗೆ ನೀವು ತೊಂದರೆ ಕೊಟ್ಟಿದ್ದೀರಿ. ಇಡೀ ದೇಶದಲ್ಲಿ ಕರ್ನಾಟಕ ಪೊಲೀಸ್ ಇಲಾಖೆಗೆ ಒಳ್ಳೆಯ ಹೆಸರಿತ್ತು. ಆ ಗೌರವ, ಘನತೆಯನ್ನ ಹಾಳು ಮಾಡಿದ್ದೀರಿ. ಎಲ್ಲಿ ನೋಡಿದ್ರು ಬರೀ ಕಾಸು, ಕಾಸು, ಕಾಸು. ನಮ್ಮ ಸರ್ಕಾರದಲ್ಲಿ ಎಲ್ಲವೂ ಕ್ಲೀನ್ ಆಗಬೇಕು. ಜನ ಈ ಸರಕಾರದಿಂದ ಬಹುದೊಡ್ಡ ಬದಲಾವಣೆಯನ್ನು ನಿರೀಕ್ಷೆ ಮಾಡಿದ್ದಾರೆ. ಅದು ಪೊಲೀಸ್ ಇಲಾಖೆಯಿಂದಲೇ ಶುರು ಆಗಬೇಕು. ಈ ಸರಕಾರದಿಂದ ಬದಲಾವಣೆ ಸಂದೇಶ ಜನರಿಗೆ ಹೋಗಬೇಕು. ನಿಮ್ಮಿಂದ ನಮಗೆ ನಯಾಪೈಸೆ ಹಣ ಬೇಕಿಲ್ಲ. ನೀವು ಯಾರಿಗೂ ಹಣ ಕೊಡುವುದೂ ಬೇಡ. ಜನ ನರಳದಂತೆ ಉತ್ತಮವಾಗಿ ಕೆಲಸ ಮಾಡಿದರೆ ಅಷ್ಟೇ ಸಾಕು” ಎಂದು ಅಧಿಕಾರಿಕಾರಿಗಳಿಗೆ ತಿಳಿಸಿದ್ದಾರೆ.
”ಈ ಹಿಂದೆ ಪೇ ಸಿಎಂ ಅಭಿಯಾನ ಮಾಡಿದಾಗ ನನ್ನ ಮತ್ತು ಸಿದ್ದರಾಮಯ್ಯರ ಜೊತೆ ಹೇಗೆ ನಡೆದುಕೊಂಡಿದ್ದೀರಾ ಎನ್ನುವುದು ಗೊತ್ತಿದೆ. ನಮ್ಮ ಮೇಲೆ ಕೇಸ್ ಹಾಕಿದ್ದೀರಿ. ನಮ್ಮ ಕಾರ್ಯಕರ್ತರ ಮೇಲೆ ಸುಳ್ಳು, ಸುಳ್ಳು ಸಾವಿರಾರು ಕೇಸ್ ಹಾಕಿ ತೊಂದರೆ ಕೊಟ್ಟಿದ್ದೀರಿ. ನಮ್ಮನ್ನ, ಸಿದ್ದರಾಮಯ್ಯ ಅವರನ್ನೇ ಬಿಡದ ನೀವು ಇನ್ನು ಸಾಮಾನ್ಯ ಜನರನ್ನು ಬಿಡುತ್ತೀರಾ? ಆದರೆ ಬಿಜೆಪಿ ವಿರುದ್ಧ ಮಾತ್ರ ಯಾವುದೇ ಕೇಸ್ ಹಾಕಲಿಲ್ಲ. ಅವರ ಜತೆ ಶಾಮೀಲಾಗಿ ಅವರು ಹೇಳಿದಂತೆ ನಡೆದುಕೊಂಡಿದ್ದೀರಿ” ಎಂದು ಆರೋಪ ಮಾಡಿದರು.
”ಟಿಪ್ಪು ಸುಲ್ತಾನ್ ಅವರನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂದು ಕೊಲೆ ಮಾಡಲು ಕರೆ ನೀಡಿದ, ಪ್ರೇರಣೆ ನೀಡಿದವರ ವಿರುದ್ಧ ಯಾಕೆ ಕೇಸ್ ಹಾಕಲಿಲ್ಲ? ಅದು ಕ್ರೈಂ ಅಲ್ವಾ? ನೀವು ಏನೇನೂ ಮಾಡಿದ್ದೀರಾ ಎನ್ನುವ ಬಗ್ಗೆ ನಮ್ಮ ಬಳಿ ಸಾಕ್ಷಿ ಇವೆ. ನಾವು ಎಲ್ಲವನ್ನೂ ನೋಡಿದ್ದೇವೆ. ಇವೆಲ್ಲ ನಮ್ಮ ಸರ್ಕಾರದಲ್ಲಿ ನಡೆಯುವುದಿಲ್. ನೀವು ಬದಲಾಗಬೇಕು, ನಿಮ್ಮ ವರ್ತನೆ ಬದಲಾಗಬೇಕು. ಇಲ್ಲದಿದ್ದರೆ ನಿಮ್ಮನ್ನೇ ಬದಲಾವಣೆ ಮಾಡಬೇಕಾಗುತ್ತದೆ” ಎಂದು ಅಧಿಕಾರಿಗಳಿಗಳಿಗೆ ಡಿಕೆಶಿ ಎಚ್ಚರಿಕೆ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw