ನಾಳೆ ನಟ ದರ್ಶನ್ ಗೆ ಸಿಗುತ್ತಾ ಜಾಮೀನು?
ಬೆಂಗಳೂರು: ನಟ ದರ್ಶನ್ ಜಾಮೀನು ಅರ್ಜಿ ನಾಳೆ(ಅ.4) ವಿಚಾರಣೆ ಬರಲಿದೆ. ಈ ನಡುವೆ ಇಂದು ಪತ್ನಿ ವಿಜಯಲಕ್ಷ್ಮೀ ಹಾಗೂ ಪುತ್ರ ವಿನೀಶ್ ಬಳ್ಳಾರಿ ಜೈಲಿಗೆ ಭೇಟಿ ನೀಡಿದ್ದಾರೆ.
ನಟ ದರ್ಶನ್ ಜೊತೆಗೆ ಪುತ್ರ ಹಾಗೂ ಪತ್ನಿ 45 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಪದೇ ಪದೇ ನ್ಯಾಯಾಂಗ ಬಂಧನ ವಿಸ್ತರಣೆಯಿಂದಾಗಿ ನಟ ದರ್ಶನ್ ಸಾಕಷ್ಟು ಬಸವಳಿದಿದ್ದಾರೆ.
ನಟ ದರ್ಶನ್ ಜೈಲು ಸೇರಿ 100 ದಿನಗಳು ಕಳೆದವು. ಬೇಲ್ ಗಾಗಿ ನಿರಂತರ ಪ್ರಯತ್ನಗಳು ನಡೆಯುತ್ತಿವೆ. ಈಗಾಗಲೇ ದರ್ಶನ್ ಪರ ವಕೀಲರು ಜಾಮೀನು ಅರ್ಜಿ ವಿಚಾರಣೆಯ ಸಂದರ್ಭದಲ್ಲಿ ಬಹಳ ಮುನ್ನೆಚ್ಚರಿಕೆಯಿಂದ ಹೆಜ್ಜೆ ಇಡುತ್ತಿದ್ದಾರೆ. ಹಾಗಾಗಿ ಈ ಬಾರಿ ಬೇಲ್ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇವತ್ತಿನಿಂದ ನವರಾತ್ರಿ ಕೂಡ ಆರಂಭವಾಗಿದೆ. ದರ್ಶನ್ ಜೈಲಿನಲ್ಲೇ ಹಬ್ಬ ಆಚರಿಸುವಂತಾಗಿದೆ. ಬೆನ್ನುನೋವು, ಕೈ ಮೂಳೆಯ ನೋವಿನಿಂದ ಬಳಲುತ್ತಿರುವ ದರ್ಶನ್ ಜೈಲಿನ ಪೆಸಿಲಿಟಿಗಳು ಸಿಗದೇ ಹೈರಾಣಾಗಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: