ಹಿಂದೂ ಧಾರ್ಮಿಕ ದತ್ತಿ ಮಂಡಳಿಯಲ್ಲಿ ಮುಸ್ಲಿಮರನ್ನು ನೇಮಕ ಮಾಡುತ್ತೀರಾ?: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಹಲವಾರು ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಕಠಿಣ ಪ್ರಶ್ನೆಗಳನ್ನು ಕೇಳಿದೆ.
ಕೇಂದ್ರ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರನ್ನು ಸೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದು, ಸರ್ಕಾರ ಹಿಂದೂ ಧಾರ್ಮಿಕ ದತ್ತಿ ಮಂಡಳಿಗಳಲ್ಲಿ ಮುಸ್ಲಿಮರನ್ನು ನೇಮಕ ಮಾಡಲು ಅವಕಾಶ ನೀಡುತ್ತದೆಯೇ ಎಂದು ಪ್ರಶ್ನಿಸಿದೆ.
ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಮತ್ತು ನ್ಯಾಯಮೂರ್ತಿ ಕೆ.ವಿ. ವಿಶ್ವನಾಥನ್ ಅವರ ಪೀಠವು ಹೊಸ ವಕ್ಫ್ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಲಾದ 73 ಅರ್ಜಿಗಳ ವಿಚಾರಣೆ ನಡೆಸಿತು.
ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಲಾಗಲಿ ಅಥವಾ ಅವುಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗಲಿ ಸುಪ್ರೀಂ ಕೋರ್ಟ್ ಗೆ ಯಾವುದೇ ನಿರ್ಬಂಧಗಳಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹೇಳಿದರು. ಈ ಸಂಬಂಧ ವಿಚಾರಣೆಯನ್ನು ಕೋರ್ಟ್ ನಾಳೆಗೆ ಮುಂದೂಡಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD