ಚನ್ನಪಟ್ಟಣ ಉಪ ಚುನಾವಣೆ: ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸ್ತಾರಾ? | ಸಾರಾ ಮಹೇಶ್ ಹೇಳಿದ್ದೇನು?
ಮೈಸೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ದೋಸ್ತಿ ಪಕ್ಷಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಟಿಕೆಟ್ ಸಿಗದಿದ್ದರೆ ಪಕ್ಷೇತರರಾಗಿ ಸ್ಪರ್ಧಿಸಲು ಸಿದ್ಧರಾಗಿದ್ದಾರೆ. ಇತ್ತ ಜೆಡಿಎಸ್ ನಿಂದ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆ ಮಾಜಿ ಸಚಿವ ಸಾರಾ ಮಹೇಶ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಅಂತ ನಿಖಿಲ್ ಸ್ಪಷ್ಟಪಡಿಸಿದ್ದಾರೆ. ದೇವೇಗೌಡರು, ಕುಮಾರಸ್ವಾಮಿ ಅವರ ಅಭಿಪ್ರಾಯ ಕೂಡ ಅದೇ ಆಗಿದೆ ಎಂದು ಹೇಳಿದ್ದಾರೆ.
ನಿಖಿಲ್ ಸ್ಪರ್ಧೆ ಮಾಡಬೇಕು ಅಂತ ಒತ್ತಡ ಇದೆ. ಆದ್ರೆ ಅವರು ಯಾವ ಒತ್ತಡಕ್ಕೂ ಮಣಿಯುವ ಸ್ಥಿತಿ ಇಲ್ಲ ಎಂದು ಅವರು ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth