ಸದ್ಯದ ಕೋಟಾ ವ್ಯವಸ್ಥೆಯಲ್ಲಿ ಬದಲಾವಣೆ ತರುವುದಿಲ್ಲ: ಮೀಸಲಾತಿ ಕುರಿತು ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ

15/12/2024

ಮುಸ್ಲಿಮರಿಗೆ ಮೀಸಲಾತಿ ನೀಡುವ ಮೂಲಕ ಕಾಂಗ್ರೆಸ್ ಎಸ್ಸಿ, ಎಸ್ಟಿ ಮತ್ತು ಒಬಿಸಿಗಳಿಗೆ ಕೋಟಾವನ್ನು ಕಡಿಮೆ ಮಾಡಿದೆ ಎಂದು ಆರೋಪಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ದೇಶದಲ್ಲಿ ಪ್ರಸ್ತುತ ಮೀಸಲಾತಿ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಮೋದಿ ಸರ್ಕಾರ ದೃಢವಾಗಿ ಹೇಳಿದೆ.

‘ಅಜೆಂಡಾ ಆಜ್ ತಕ್ 2024’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಲೇವಡಿ ಮಾಡಿದ್ರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ ನಂತರ ಅವರು “ಅಹಂಕಾರಿ” ಆಗಿದ್ದಾರೆ ಎಂದು ಹೇಳಿದರು. “ನಾವು ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಪ್ರತಿಪಕ್ಷಗಳು ಹೇಳಿಕೊಂಡಿವೆ. ನಾವು ಮೀಸಲಾತಿಯನ್ನು ಮುಟ್ಟಿಲ್ಲ.

ಕಾಂಗ್ರೆಸ್ ಮುಸ್ಲಿಮರಿಗೆ ಮೀಸಲಾತಿಯನ್ನು ನೀಡಿತು ಮತ್ತು ಅದನ್ನು ಎಸ್ಸಿ, ಎಸ್ಟಿ ಮತ್ತು ಒಬಿಸಿಗಳಿಗೆ ಕಡಿಮೆ ಮಾಡಿತು. ಪ್ರಸ್ತುತ ಮೀಸಲಾತಿ ವ್ಯವಸ್ಥೆಯಲ್ಲಿ ನಾವು ಬದಲಾವಣೆ ಮಾಡುವುದಿಲ್ಲ ಎಂದು ನಾವು ಸ್ಪಷ್ಟವಾಗಿ ಹೇಳಿದ್ದೇವೆ” ಎಂದು ಶಾ ಹೇಳಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version