ಮಳೆಯ ಮುನ್ಸೂಚನೆ: ಕರಾವಳಿ ಸೇರಿದಂತೆ ರಾಜ್ಯ ಈ ಭಾಗಗಳಲ್ಲಿ ಮಳೆಯಾಗಲಿದೆ
ಕರಾವಳಿ: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಬಿಸಿಲು ಹಾಗೂ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಸೆಪ್ಟೆಂಬರ್ 28ರಿಂದ ಕರಾವಳಿ ಭಾಗಗಳಲ್ಲಿ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. 29ರಿಂದ ಮಲೆನಾಡು ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಒಂದೊಂದು ಸಾಮಾನ್ಯ ಮಳೆಯ ಸಾಧ್ಯತೆ ಇದ್ದರೆ, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಸೆಪ್ಟೆಂಬರ್ 27ರಿಂದ ಬಿಸಿಲಿನ ಅವಧಿ ಹೆಚ್ಚಿರಲಿದ್ದು, 29ರಿಂದ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಒಳನಾಡು : ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಚಿತ್ರದುರ್ಗ, ದಾವಣಗೆರೆ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಸೆಪ್ಟೆಂಬರ್ 27ರಿಂದ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸೆಪ್ಟೆಂಬರ್ 28ರಿಂದ ದಕ್ಷಿಣ ಒಳನಾಡಿನ ತಮಿಳುನಾಡು – ಕರ್ನಾಟಕ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 29ರಿಂದ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: