ವೈನ್ ಶಾಪ್ ಎದುರೇ ವ್ಯಕ್ತಿ ಹೃದಯಾಘಾತದಿಂದ ಸಾವು
18/08/2022
ವಿಪರೀಪ ಮದ್ಯಸೇವನೆ ಮಾಡುವ ಚಟ ಹೊಂದಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಕಾವ್ರಾಡಿ ಗ್ರಾಮದ ಕಂಡ್ಲೂರು ಗಂಗಾ ವೈನ್ಸ್ ಶಾಪ್ ಬಳಿ ಆ.17ರಂದು ಮಧ್ಯಾಹ್ನ ನಡೆದಿದೆ.
ಗುಲ್ವಾಡಿ ಗ್ರಾಮದ 60ವರ್ಷದ ಕುಷ್ಠ ಪೂಜಾರಿ ಮೃತದುರ್ದೈವಿ. ಇವರು ವಿಪರೀತ ಮದ್ಯಪಾನ ಚಟವನ್ನು ಹೊಂದಿದ್ದು, ಇದರಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು.
ನಿನ್ನೆ ಮಧ್ಯಾಹ್ನ ಗಂಗಾ ವೈನ್ ಶಾಪ್ ಬಳಿ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka