ವೈದ್ಯರ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಮಹಿಳೆ: ಓಪಿಡಿ ಬಂದ್ ಮಾಡಿ ವೈದ್ಯರಿಂದ ಪ್ರತಿಭಟನೆ
ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ವೈದ್ಯರ ಮೇಲೆ ಮಹಿಳೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಇದರಿಂದಾಗಿ ಓಪಿಡಿ ಬಂದ್ ಮಾಡಿ ವೈದ್ಯರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಮೂಳೆ ತಜ್ಞ ವೆಂಕಟೇಶ್ ಮೇಲೆ ಮಹಿಳೆ ಏಕಾಏಕಿ ಹಲ್ಲೆ ನಡೆಸಿದ್ದಾಳೆ. ಶರ್ಟ್, ಕುತ್ತಿಗೆ ಪಟ್ಟಿ ಹಿಡಿದು ಎಳೆದಾಡಿ ಹಲ್ಲೆ ನಡೆಸಲಾಗಿದೆ. ವೈದ್ಯರ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆ ರಕ್ಷಣೆ ನೀಡುವಂತೆ ಆಗ್ರಹಿಸಿ ಆಸ್ಪತ್ರೆ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದರು.
ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಅಸ್ಪತ್ರೆಗೆ ಬಂದಿದ್ದ ಯುವಕನಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದ ವೇಳೆ ರೋಗಿ ಅಕ್ಕನಿಗೆ ವೈದ್ಯರು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ಕೋಪಗೊಂಡು ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ.
ಹಲ್ಲೆ ಹಿನ್ನೆಲೆ ವೈದ್ಯರಿಗೆ ರಕ್ಷಣೆ ನೀಡುವಂತೆ ಒತ್ತಾಯಿಸಿ ಓಪಿಡಿ ಬಂದ್ ಮಾಡಿ ನ್ಯಾಯ ಕೊಡಿಸುವಂತೆ ಅಸ್ಪತ್ರೆ ಸಿಬ್ಬಂದಿಗಳು ಆಗ್ರಹಿಸಿದರು. ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.
ಪ್ರತಿಭಟನೆ:
ವೈದ್ಯರ ಮೇಲೆ ಮಹಿಳೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಹಿನ್ನೆಲೆ ನಗರ ಠಾಣೆ ಮುಂದೆ ಜಮಾಯಿಸಿದ ಆರೋಗ್ಯ ಇಲಾಖೆ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದರು. ಪ್ರತಿಭಟನೆಗೆ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ವಿವಿಧ ಸಂಘಟನೆಗಳು ಸಾಥ್ ನೀಡಿದವು.
ಆಟೋ ಚಾಲಕರ ಸಂಘ, ಕರವೇ, ಬಜರಂಗದಳ ಸೇರಿದಂತೆ ವಿವಿಧ ಸಂಘಟನೆ ಪ್ರತಿಭಟನೆಗೆ ಸಾಥ್ ನೀಡಿದರು. ಕೂಡಲೇ ಹಲ್ಲೆ ಕೋರರನ್ನ ಬಂಧಿಸುವಂತೆ ಆಗ್ರಹಿಸಿದ್ದಾರೆ.
ಘಟನಾ ಸ್ಥಳದಲ್ಲಿ ಜಿಲ್ಲಾಸ್ಪತ್ರೆ ಸರ್ಜನ್, ಡಿಸ್ಟ್ರಿಕ್ಟ್ ಸರ್ಜನ್ ಮೊಕ್ಕಾಂ ಹೂಡಿದ್ದಾರೆ. ಪ್ರತಿಭಟನೆಯಲ್ಲಿ 100 ಕ್ಕೂ ಹೆಚ್ಚು ಆರೋಗ್ಯ ಸಿಬ್ಬಂದಿಗಳು ಭಾಗಿಯಾಗಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: