ಮೈಕ್ರೋ ಫೈನಾನ್ಸ್ ಸಾಲಕ್ಕೆ ಹೆದರಿ ಮಹಿಳೆ ಆತ್ಮಹತ್ಯೆ!
ಮೈಸೂರು: ಮಹಿಳೆಯೊಬ್ಬರು ವಿಷದ ಮಾತ್ರೆ ನುಂಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ.
ಜಯಶೀಲಾ (53) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ಐಐಎಫ್ ಎಲ್, ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್ ನಲ್ಲಿ ಇವರು ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆ 5 ಲಕ್ಷ ರೂ. ಸಾಲ ಪಡೆದಿದ್ದರು.
ಪ್ರತಿ ತಿಂಗಳು 20 ಸಾವಿರಕ್ಕೂ ಹೆಚ್ಚು ಇಎಂಐ ಕಟ್ಟಲು ಬರುತ್ತಿತ್ತು. ಸಾಲ ತೆಗೆದುಕೊಂಡಿದ್ದ ಹಸು ಕೂಡ ಇತ್ತೀಚೆಗೆ ಮೃತಪಟ್ಟಿತ್ತು. ಇದರಿಂದಾಗಿ ಜೀವನ ನಿರ್ವಹಣೆ ಕಷ್ಟಕರವಾಗಿತ್ತು. ಇದರಿಂದ ನೊಂದು ಜಮೀನಿನಲ್ಲಿ ವಿಷದ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.
ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ತನಿಖೆಯಿಂದ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಬೇಕಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: