ಮಹಿಳೆಯನ್ನು ಬಲಿ ಪಡೆದ ಕಾಡಾನೆ: ಅಧಿಕಾರಿಗಳೇ ಇನ್ನೆಷ್ಟು ಜನರ ಜೀವ ಬಲಿ ಬೇಕು?
ಮೂಡಿಗೆರೆ: ತಾಲೂಕಿನ ಹುಲೇಮನೆ ಕುಂದೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ.
45 ವರ್ಷದ ಶೋಭಾ ಅಮೃತ ಮೃತ ದುರ್ದೈವಿ. ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು ಜನರು ಆತಂಕದಲ್ಲಿ ಬದುಕು ಸಾಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಡಾನೆಗಳು ಮನೆ ಸಮೀಪವೇ ಬರುತ್ತಿದ್ದು ಜನರು ಭಯಭೀತರಾಗಿದ್ದಾರೆ.
ಜಾನುವಾರುಗಳಿಗೆ ಹುಲ್ಲು ತರಲು ಹೋದಾಗ ಶೋಭಾ ಎಂಬ ಮಹಿಳೆ ಮೇಲೆ ಕಾಡಾನೆ ನಡೆಸಿದ್ದು ಮಹಿಳೆಯ ಶವವನ್ನು ಕಾಡಾನೆ ನಜ್ಜುಗುಜ್ಜು ಮಾಡಿದೆ ಗ್ರಾಮಸ್ಥರು ಭಯ ಭೀತರಾಗಿದ್ದು, ಹಾಡ ಹಗಲೇ ನಡೆದ ಘಟನೆಗೆ ಅರಣ್ಯ ಇಲಾಖೆಯ ಬೇಜವಾಬ್ದಾರಿತನವೇ ಕಾರಣ ಎಂದು ಆರೋಪಿಸಿದ್ದಾರೆ.
ಕಾಡಾನೆಗಳು ಊರಿನಲ್ಲಿ ಇದೆ. ಅರಣ್ಯ ಇಲಾಖೆ ಆನೆಗಳನ್ನು ಕಾಡಿಗಟ್ಟುವ ಕೆಲಸ ಮಾಡಿದ್ದರೆ ಈ ಘಟನೆಯೇ ನಡೆಯುತ್ತಿರಲಿಲ್ಲ, ಜನ ಪ್ರತಿನಿಧಿಗಳು ಅಧಿಕಾರಿಗಳಿಗೆ ಬಿಸಿ ಮುಟ್ಟಿಸದೇ ಏನು ಮಾಡುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka