ಆಸ್ಪತ್ರೆಯ ಮೆಟ್ಟಿಲಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ!

ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಮಹಿಳೆಯೊಬ್ಬರು ಆಸ್ಪತ್ರೆಯ ಮೆಟ್ಟಿಲಿನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ನಿಂದ ಸುಮಾರು 60 ಕಿ.ಮೀ. ದೂರದಲ್ಲಿರುವ ಶಿವಪುರಿ ಎಂಬಲ್ಲಿ ನಡೆದಿದೆ.
ಅರುಣ್ ಪರಿಹಾರ್ ಎಂಬ ವ್ಯಕ್ತಿಯ ಪತ್ನಿ ವಾಲಾಬಾಯಿಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಆ್ಯಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಆ್ಯಂಬುಲೆನ್ಸ್ ಕೂಡ ತಡವಾಗಿ ತಲುಪಿದೆ. ನಗರದ ಜಿಲ್ಲಾಸ್ಪತ್ರೆಗೆ ಗರ್ಭಿಣಿಯನ್ನು ಕರೆದೊಯ್ಯಲಾಯಿತು. ಆದರೆ ಅಲ್ಲಿ ಸ್ಟ್ರೆಚರ್ ಅಥವಾ ವಾರ್ಡ್ ಬಾಯ್ ಯಾರೂ ಪತ್ತೆಯಾಗಲಿಲ್ಲ, ಇದರಿಂದಾಗಿ ಗರ್ಭಿಣಿಯನ್ನು ಆಸ್ಪತ್ರೆಯೊಳಗೆ ಸಾಗಿಸುವುದಕ್ಕೂ ಮೊದಲೇ ಆಕೆ ಆಸ್ಪತ್ರೆಯ ಮೆಟ್ಟಿಲಿನಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಅರುಣ್ ಆರೋಪಿಸಿದ್ದಾರೆ.
ಇನ್ನೂ ಮಹಿಳೆ ಆಸ್ಪತ್ರೆ ಮೆಟ್ಟಿಲಿನಲ್ಲೇ ಮಗುವಿಗೆ ಜನ್ಮ ನೀಡಿದ್ದರಿಂದಾಗಿ ಜನ ಸುತ್ತಲೂ ಸೇರಿದ್ದು, ಈ ವೇಳೆ ಆಸ್ಪತ್ರೆಯ ಸಿಬ್ಬಂದಿಗೆ ಪತಿ ಅರುಣ್ ತನ್ನ ಪತ್ನಿಯನ್ನು ದಾಖಲಿಸಿಕೊಳ್ಳುವಂತೆ ಮನವಿ ಮಾಡಿದ ಬಳಿಕ ಸ್ಟ್ರೆಚರ್ ನಲ್ಲಿ ಮಹಿಳೆ ಹಾಗೂ ಮಗುವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಸದ್ಯ ತಾಯಿ ಮಗು ಆರೋಗ್ಯವಾಗಿದ್ದಾರೆ ಎನ್ನಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw