ಅತ್ಯಾಚಾರ ಯತ್ನದಿಂದ ತಪ್ಪಿಸಿಕೊಳ್ಳಲು ಯತ್ನ: ಚಲಿಸುತ್ತಿದ್ದ ರೈಲಿನಿಂದ ಜಿಗಿದ ಯುವತಿಗೆ ಗಾಯ

ಬೋಗಿಯಲ್ಲಿ ತನ್ನ ಮೇಲೆ ಅತ್ಯಾಚಾರಕ್ಕೆ ಪ್ರಯತ್ನಿಸಿದ ವ್ಯಕ್ತಿಯಿಂದ ತಪ್ಪಿಸಿಕೊಳ್ಳಲು ಚಲಿಸುವ ರೈಲಿನಿಂದ ಜಿಗಿದ 23 ವರ್ಷದ ಯುವತಿ ಗಾಯಗೊಂಡಿದ್ದಾರೆ ಎಂದು ಸರ್ಕಾರಿ ರೈಲ್ವೆ ಪೊಲೀಸರು ತಿಳಿಸಿದ್ದಾರೆ.
ಸರ್ಕಾರಿ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿಯು ಪೊಲೀಸರಿಗೆ ಈ ಘಟನೆ ಮಾರ್ಚ್ 22 ರ ಸಂಜೆ ನಡೆದಿದೆ ಎಂದು ಹೇಳಿದ್ದಾರೆ.
ಸಿಕಂದರಾಬಾದ್ ರೈಲ್ವೆ ನಿಲ್ದಾಣದಿಂದ ಮೆಡ್ಚಲ್ಗೆ ತೆರಳುತ್ತಿದ್ದ ಎಂಎಂಟಿಎಸ್ (ಮಲ್ಟಿ-ಮಾಡಲ್ ಟ್ರಾನ್ಸ್ ಪೋರ್ಟ್ ಸಿಸ್ಟಮ್) ರೈಲಿನ ಮಹಿಳಾ ಬೋಗಿಯಲ್ಲಿ ಅವರು ಏಕಾಂಗಿಯಾಗಿ ಪ್ರಯಾಣಿಸುತ್ತಿದ್ದಾಗ ಈ ದಾಳಿ ನಡೆದಿದೆ.
ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್, ಮಹಿಳೆಯ ಕುಟುಂಬದೊಂದಿಗೆ ಮಾತನಾಡಿ, ಅಪರಾಧಿಯನ್ನು ನ್ಯಾಯದ ಮುಂದೆ ತರುವುದನ್ನು ಖಚಿತಪಡಿಸಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj