ಫೋನ್ ನಂಬರ್ ಕೇಳಿದ ವ್ಯಕ್ತಿಗೆ ಕಲ್ಲಿನಿಂದ ಹೊಡೆದ ಮಹಿಳೆ! - Mahanayaka

ಫೋನ್ ನಂಬರ್ ಕೇಳಿದ ವ್ಯಕ್ತಿಗೆ ಕಲ್ಲಿನಿಂದ ಹೊಡೆದ ಮಹಿಳೆ!

mallikarjuna
27/05/2023

ಬಾಗಲಕೋಟೆ: ಫೋನ್ ನಂಬರ್ ಕೇಳಿ ಪೀಡಿಸುತ್ತಿದ್ದ ವ್ಯಕ್ತಿಯೋರ್ವನಿಗೆ ಮಹಿಳೆ ಕಲ್ಲಿನಿಂದ ಹೊಡೆದು ಹಲ್ಲೆ ಮಾಡಿರುವ ಘಟನೆ  ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದ ಬಸ್ ನಿಲ್ದಾಣದ ಬಳಿ ನಡೆದಿದೆ.

ಮಲ್ಲಿಕಸಾಬ್ ಬೇಪಾರಿ ಎಂಬಾತ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು ಈತ ಕಳೆದ 1 ತಿಂಗಳುಗಳಿಂದ ಫೋನ್ ನಂಬರ್ ಕೊಡುವಂತೆ ಮಹಿಳೆಯನ್ನು ಪೀಡಿಸುತ್ತಿದ್ದ ಎನ್ನಲಾಗಿದೆ.

ಕಲ್ಲಿನಿಂದ ಹೊಡೆದ ಪರಿಣಾಮ ಮಲ್ಲಿಕಸಾಬ್ ಬೇಪಾರಿ ತಲೆಗೆ ಗಾಯವಾಗಿದ್ದು, ಆತನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.  ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ