ಗೃಹಲಕ್ಷ್ಮೀ ಹಣದಿಂದ ಮಕ್ಕಳಿಗೆ ಲೈಬ್ರೆರಿ ನಿರ್ಮಿಸಿದ ಮಹಿಳೆ! - Mahanayaka

ಗೃಹಲಕ್ಷ್ಮೀ ಹಣದಿಂದ ಮಕ್ಕಳಿಗೆ ಲೈಬ್ರೆರಿ ನಿರ್ಮಿಸಿದ ಮಹಿಳೆ!

mallava meti
13/10/2024

ಬೆಳಗಾವಿ: ಗೃಹ ಲಕ್ಷ್ಮೀ ಹಣದಿಂದ ಮಹಿಳೆಯೊಬ್ಬರು ಮಕ್ಕಳಿಗೆ ಗ್ರಂಥಾಲಯ ನಿರ್ಮಾಣ ಮಾಡಿರುವ ಘಟನೆ ಬೆಳಗಾವಿಯ ರಾಯಭಾಗ ತಾಲೂಕಿನ ಮಂಟೂರ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿಯ ರಾಯಭಾಗ ತಾಲೂಕಿನ ಮಂಟೂರ ಗ್ರಾಮ ಪಂಚಾಯತಿಯ ಮಹಿಳೆ ಮಲ್ಲವ್ವ ಭೀಮಪ್ಪ ಮೇಟಿ, ತಮಗೆ ಗೃಹಲಕ್ಷ್ಮೀ ಹಣದಿಂದ ಬಂದ ಹಣವನ್ನು ಕೂಡಿಟ್ಟು, ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗ್ರಂಥಾಲಯ ನಿರ್ಮಾಣ ಮಾಡಿದ್ದಾರೆ.

ಈ ಬಗ್ಗೆ ಟ್ವಿಟರ್ ನಲ್ಲಿ ಮಲ್ಲವ್ವ ಮೇಟಿ ಮಾಹಿತಿ ಹಂಚಿಕೊಂಡಿದ್ದು, ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಡೆವಲಪ್‌ಮೆಂಟ್ ಕಮೀಷನರ್ ಉಮಾ ಮಹದೇವನ್ ದಾಸ್‌ಗುಪ್ತ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಟ್ಯಾಗ್ ಮಾಡಿದ್ದಾರೆ. ಮಂಟೂರ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾಗಿರುವ ಮಲ್ಲವ್ವ ಭೀಮಪ್ಪ ಮೇಟಿ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಕಳೆದ 12 ತಿಂಗಳುಗಳಿಂದ ತಮಗೆ ಗೃಹಲಕ್ಷ್ಮೀ ಹಣದಿಂದ 26 ಸಾವಿರ ರೂಪಾಯಿ ಬಂದಿತ್ತು. ಪಂಚಾಯತ್ ಮೆಂಬರ್ ಆಗಿರುವ ಇವರಿಗೆ ಗೌರವಧನ ಕೂಡ ಸಿಗುತ್ತಿತ್ತು. ಈ ಎಲ್ಲ ಹಣವನ್ನು ಸಮಾಜಕ್ಕೆ ಕೊಡುಗೆಯಾಗಿ ಅವರು ನೀಡಿದ್ದಾರೆ. ಒಂದು ಸಣ್ಣ ಪ್ರಮಾಣದ ಗ್ರಂಥಾಲಯವನ್ನು ಒಂದೂವರೆ ಲಕ್ಷ ರೂಪಾಯಿ ಹಣದಲ್ಲಿ ಅವರು ನಿರ್ಮಿಸಿದ್ದಾರೆ ಎಂದು ಮಲ್ಲವ್ವ ಭೀಮಪ್ಪ ಮೇಟಿ ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ