ಇಬ್ಬರು ಮಕ್ಕಳೊಂದಿಗೆ ಸಾವಿಗೆ ಶರಣಾಗಲು ಯತ್ನಿಸಿದ ಮಹಿಳೆ: ಓರ್ವ ಮಗಳು ಅಪಾಯದಿಂದ ಪಾರು
ಮಹಿಳೆಯೊಬ್ಬರು ತನ್ನಿಬ್ಬರು ಮಕ್ಕಳೊಂದಿಗೆ ನೇಣು ಬಿಗಿದು ಸಾವಿಗೆ ಶರಣಾಗಲು ಯತ್ನಿಸಿದ ಘಟನೆ ಮಂಗಳೂರು ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಿಯಾಲ್ ಗುತ್ತು ಬಳಿ ನಡೆದಿದೆ.
ಆ ಪೈಕಿ ಮಹಿಳೆ ಮತ್ತು ಒಬ್ಬ ಪುತ್ರಿ ಮೃತಪಟ್ಟರೆ, ಇನ್ನೋರ್ವ ಪುತ್ರಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ವಿಜಯಾ (33) ಮತ್ತವರ ಮಗಳು ಶೋಭಿಕಾ (4) ಮೃತಪಟ್ಟವರು. ಈಕೆಯ 12 ವರ್ಷದ ಪುತ್ರಿ ಅಪಾಯದಿಂದ ಪಾರಾಗಿದ್ದಾಳೆ.
ವಿಜಯಾ ತನ್ನ ಮಕ್ಕಳಾದ ಶೋಭಿಕಾ ಮತ್ತು ಇನ್ನೋರ್ವಳ ಜೊತೆ ಮನೆಯಲ್ಲಿ ವಾಸವಾಗಿದ್ದರು. ಇಬ್ಬರು ಮಕ್ಕಳನ್ನು ಒಂದೇ ಕುಣಿಕೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡಿದ್ದರು. ಈ ವೇಳೆ ಮತ್ತೋರ್ವ ಮಗಳು ಕುಣಿಕೆಯಿಂದ ತಪ್ಪಿಸಿಕೊಂಡಿದ್ದಾಳೆ.
ವಿಜಯಾರ ಪತಿ ಇತ್ತೀಚೆಗೆ ಸಾವಿಗೆ ಶರಣಾಗಿದ್ದರು.ಎನ್ನಲಾಗಿದೆ. ವಿಜಯಾ ತನ್ನಿಬ್ಬರು ಮಕ್ಕಳೊಂದಿಗೆ ಸ್ವಂತ ಮನೆಯಲ್ಲಿ ವಾಸವಾಗಿದ್ದರು. ಮಹಿಳೆಯು ಸಾವಿಗೆ ಶರಣಾಗಲು ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw