ಮಹಿಳೆಯ ಅನುಮಾನಾಸ್ಪದ ಸಾವು: ಪತಿಯ ವಿರುದ್ಧ ಕೊಲೆ ಆರೋಪ

ಮಂಡ್ಯ: ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಮಂಡ್ಯ ತಾಲೂಕಿನ ಕೆ.ಗೌಡಗೆರೆ ಗ್ರಾಮದಲ್ಲಿ ನಡೆದಿದ್ದು, ಪತಿಯ ವಿರುದ್ಧ ಕುಟುಂಬಸ್ಥರು ಹತ್ಯೆ ಆರೋಪ ಮಾಡಿದ್ದಾರೆ.
ಜಾಹ್ನವಿ(26) ಮೃತಪಟ್ಟವರಾಗಿದ್ದರು. ಇವರ ಪತಿ ಯಶ್ವಂತ್ ಗುರುವಾರ ಜಾಹ್ನವಿಯ ಪೋಷಕರಿಗೆ ಕರೆ ಮಾಡಿ, ಜಾಹ್ನವಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಿದ್ದಾನೆ.
ಜಾಹ್ನವಿ ಪೋಷಕರು ಬಂದು ನೋಡಿದ ವೇಳೆ ಮೃತದೇಹದ ಮೈಮೇಲೆ, ಮುಖದ ಮೇಲೆ ರಕ್ತದ ಕಲೆ ಪತ್ತೆಯಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಯಶ್ವಂತ್ ಮದುವೆಯಾದಾಗಿನಿಂದಲೂ ಜಾಹ್ನವಿಗೆ ಕಿರುಕುಳ ನೀಡುತ್ತಿದ್ದ. ಕುಡಿದು ಬಂದು ಮನಸೋ ಇಚ್ಛೆ ಹಲ್ಲೆ ನಡೆಸುತ್ತಿದ್ದ. ಆತ ಗಾಂಜಾ ಸೇವಿಸುತ್ತಿದ್ದ ಎಂದು ಪೋಷಕರು ಆರೋಪಿಸಿದ್ದಾರೆ. ಕೆರಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: