ಬಜೆಟ್ ನಲ್ಲಿ ಮಹಿಳೆಯರು, ಯುವಕರಿಗೆ ಹೆಚ್ಚು ಆದ್ಯತೆ: ಬಸವರಾಜ್ ಬೊಮ್ಮಾಯಿ
ಬೆಂಗಳೂರು: ಈ ಬಾರಿಯ ಬಜೆಟ್ ನಲ್ಲಿ ಜನಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡಲು ಚಿಂತಿಸಿದ್ದೇವೆ. ಮಹಿಳೆಯರು, ಯುವಕರಿಗೆ ಹೆಚ್ಚು ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನವರಿ 17ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಸುತ್ತೇವೆ. ಬಜೆಟ್ ಅಧಿವೇಶನದ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ ಎಂದು ಹೇಳಿದರು.
ದುಡಿಯುವ ವರ್ಗಕ್ಕೆ ಸಹಾಯ, ಪ್ರತಿಯೊಂದು ಕುಟುಂಬಕ್ಕೂ ಮನೆ ಕೊಡಿಸುವ ಕಾರ್ಯ, ಹೆಣ್ಣು ಮಕ್ಕಳ ಹೆಸರಿನಲ್ಲಿ ಯೋಜನೆ, ಸ್ತ್ರೀಶಕ್ತಿ ಸಾಮರ್ಥ್ಯ ಯೋಜನೆ ವಿಶೇಷ ಯೋಜನೆ ತರುತ್ತೇವೆ ಎಂದು ಅವರು ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw