ಕಬ್ಬನ್ ಪಾರ್ಕ್‌ನಲ್ಲಿ ಮಾರ್ಚ್ 11, 12 ರಂದು ಮಹಿಳಾ ಕ್ರೀಡಾ ಹಬ್ಬ: ಸಚಿವ ಡಾ.ನಾರಾಯಣಗೌಡ
ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಾರ್ಚ್ 11 ಮತ್ತು 12 ಮಹಿಳಾ ಕ್ರೀಡಾ ಹಬ್ಬ ಆಯೋಜಿಸುವುದಾಗಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.
ಮಹಿಳೆಯರಲ್ಲಿ ಕ್ರೀಡಾ ಉತ್ಸಾಹವನ್ನು ಹುರಿದುಂಬಿಸಲು ಹಾಗೂ ಕ್ರೀಡಾ ಮನೊಭಾವನೆಯನ್ನು ಮೂಡಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿ “ಮಹಿಳಾ ಕ್ರೀಡಾ ಹಬ್ಬ” ವನ್ನು ಆಯೋಜಿಸಲಾಗುತ್ತಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾರವರು ಉದ್ಘಾಟಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಮಹಿಳೆಯರಿಗಾಗಿ ಕ್ರೀಡೆಗಳು, ಸಾಹಸ ಕ್ರೀಡೆಗಳು, ಗ್ರಾಮೀಣ ಮತ್ತು ಸಾಂಪ್ರದಾಯಿಕ ಕ್ರೀಡೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಕಲೆ ಮತ್ತು ಕರಕುಶಲಗಳು, ಮನರಂಜನೆ ಮತ್ತು ಮೋಜಿನ ಆಟಗಳು ನಡೆಯಲಿದ್ದಯ, ಕಾರ್ನಿವಲ್ ಮಳಿಗೆಗಳು ಮತ್ತು ಆಹಾರದ ಮಳಿಗೆಗಳು ಕೂಡ ಇರಲಿವೆ.
ಹಾಕಿ, ಕಬ್ಬಡಿ, ಆರ್ಚರಿ ಮತ್ತು ಸ್ಕೇಟಿಂಗ್, ಸಾಹಸ ಕ್ರೀಡೆಗಳಲ್ಲಿ ವಾಲ್ ಕ್ಲೈಬಿಂಗ್, ರಾಪಲಿಂಗ್, ಕಯಾಕಿಂಗ್ ಮತ್ತು ರಾಫ್ಟಿಂಗ್, ಸಾಂಪ್ರದಾಯಿಕ ಕ್ರೀಡೆಗಳಲ್ಲಿ ಕುಂಟೆ ಬಿಲ್ಲೆ, ಅಳಿಗುಳಿಮನೆ ಆಟ, ಲಗೋರಿ, ಹಗ್ಗ ಜಗ್ಗಾಟ, ಕಲೆ ಮತ್ತು ಕರಕುಶಲಗಳಲ್ಲಿ ರಂಗೋಲಿ, ಮುಖ ಚಿತ್ರೀಕರಣ, ಕ್ಯಾಲಿಗ್ರಫಿ, ಮೆಹಂದಿ ಮತ್ತು ಮಡಿಕೆ ತಯಾರಿಕೆ ಮನರಂಜನೆ ಮತ್ತು ಮೋಜಿನ ಆಟಗಳಲ್ಲಿ ಮ್ಯೂಸಿಕಲ್ ಪಜಲ್‌ಗಳು, ಡಮ್ಸರೇಡ್ಸ್, ಮೆಮೊರಿ ಆಟಗಳು, ಮ್ಯೂಸಿಕಲ್ ಚೇರ್, ಕೆರೆ ದಡ, ಬಕೆಟ್ ಬಾಲ್ ಮತ್ತಷ್ಟು ಹಲವಾರು ಆಟಗಳು, ಮತ್ತಿತರ ಚಟುವಟಿಕೆಗಳು ನಡೆಯಲಿವೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಸಚಿವ ಡಾ.ನಾರಾಯಣಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw