ಶೌಚಾಲಯದ ಗುಂಡಿ ತೋಡುತ್ತಿದ್ದ ವೇಳೆ ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು
ಮನೆಯೊಂದರ ಶೌಚಾಲಯದ ಗುಂಡಿ ತೋಡುವ ವೇಳೆ ಮಣ್ಣು ಕುಸಿದ ಪರಿಣಾಮ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಅಡ್ಡೂರಿನಲ್ಲಿ ನಡೆದಿದೆ.
ಈ ವೇಳೆ ಇಬ್ಬರು ಗಾಯಗೊಂಡಿದ್ದು, ಅವರನ್ನು ಮಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಆದಂ (58) ಮೃತಪಟ್ಟವರು. ಆರೀಫ್ ಎಂಬುವವರಿಗೆ ಸೇರಿದ ಮನೆಯ ಪಾಯಿಖಾನೆಗೆ ಮೂವರು ಗುಂಡಿ ತೋಡುವ ವೇಳೆ ಆಕಸ್ಮಿಕವಾಗಿ ಮಣ್ಣು ಕುಸಿಯಿತು ಎನ್ನಲಾಗಿದೆ.
ಈ ಸಂದರ್ಭ ಆದಂ ಅವರು ಮಣ್ಣಿನಡಿಗೆ ಬಿದ್ದು ಮೃತಪಟ್ಟರೆ, ಇತರ ಇಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ. ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka