ಅಡ್ಯನಡ್ಕದಲ್ಲಿ ಕಾರ್ಯಾಗಾರ ವಿವಾದ: ಮುಖ್ಯೋಪಾಧ್ಯಾಯ ಟಿ.ಆರ್. ನಾಯ್ಕ್ ಅಮಾನತು ಎಂಬ ಆದೇಶ ಪ್ರತಿ ವೈರಲ್
ದಕ್ಷಿಣ ಕನ್ನಡ ಜಿಲ್ಲೆಯ ಅಡ್ಯನಡ್ಕದಲ್ಲಿ ಮುಸ್ಲಿಂ ಸಂಘಟನೆ ಆಯೋಜಿಸಿದ್ದ ಕಾರ್ಯಾಗಾರಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಆರ್. ನಾಯ್ಕ್ ರನ್ನು ಶಾಲಾ ಆಡಳಿತ ಸಮಿತಿಯು ತಾತ್ಕಾಲಿಕವಾಗಿ ಸೇವೆಯಿಂದ ಅಮಾನತುಗೊಳಿಸಿದೆ ಎಂಬ ಆದೇಶ ಪ್ರತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಫೆಬ್ರವರಿ 18ರಂದು 10ನೇ ತರಗತಿಯ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಕಾರ್ಯಾಗಾರಕ್ಕೆ ಕಳುಹಿಸಿದ ಹಿನ್ನೆಲೆಯಲ್ಲಿ ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಆರ್. ನಾಯ್ಕ್ ರನ್ನು ತಾತ್ಕಾಲಿಕವಾಗಿ ಸೇವೆಯಿಂದ ಅಮಾನತುಗೊಳಿಸಿ ಅಡ್ಯನಡ್ಕ ಎಜ್ಯುಕೇಶನ್ ನ ಕಾರ್ಯದರ್ಶಿ ಆದೇಶಿಸಿದ್ದಾರೆ ಎಂಬ ಪತ್ರ ವೈರಲ್ ಆಗುತ್ತಿದೆ.
ಶೈಕ್ಷಣಿಕ ಕಾರ್ಯಾಗಾರದಲ್ಲಿ ಧಾರ್ಮಿಕ ಪ್ರವಚನ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ದಾಳಿ ನಡೆಸಿದ್ದರು. ಈ ಬಗ್ಗೆ ವಿಟ್ಲ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಆಡಳಿತ ಮಂಡಳಿಯು ಮಾಧ್ಯಮಗಳಿಗೆ ಯಾವುದೇ ಸ್ಪಷ್ಟನೆ ನೀಡಿಲ್ಲ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw