ಡಬ್ಲ್ಯುಎಫ್ ಐ ಮುಖ್ಯಸ್ಥ ಬ್ರಿಜ್ ಭೂಷಣ್ ವಿರುದ್ಧ ತನಿಖೆಗೆ ಆಗ್ರಹ: ಅಮಿತ್ ಶಾ ಭೇಟಿ ಮಾಡಿದ ಕುಸ್ತಿಪಟುಗಳು

ಕೆಲವು ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ದೇಶದ ಉನ್ನತ ಕುಸ್ತಿಪಟುಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಡಬ್ಲ್ಯುಎಫ್ಐ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ವರದಿಗಳ ಪ್ರಕಾರ, ಪ್ರತಿಭಟನಾ ನಿರತ ಕುಸ್ತಿಪಟುಗಳು ಮತ್ತು ಗೃಹ ಸಚಿವರ ನಡುವಿನ ಸಭೆಯು ರಾತ್ರಿ ನಡೆಯಿತು. ಅಮಿತ್ ಶಾ ಅವರ ನಿವಾಸದಲ್ಲಿ ನಡೆದ ಸಭೆ ಮಧ್ಯರಾತ್ರಿಯವರೆಗೂ ನಡೆಯಿತು. ಈ ಸಮಯದಲ್ಲಿ ಕುಸ್ತಿಪಟುಗಳು ಬ್ರಿಜ್ ಭೂಷಣ್ ವಿರುದ್ಧ ಶೀಘ್ರ ಚಾರ್ಜ್ ಶೀಟ್ ಸಲ್ಲಿಸುವಂತೆ ಒತ್ತಾಯಿಸಿದರು.
ಕುಸ್ತಿಪಟುಗಳ ಮಾತುಗಳನ್ನು ಆಲಿಸಿದ ಅಮಿತ್ ಶಾ, ಅವರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವುದಾಗಿ ಭರವಸೆ ನೀಡಿದರು. ಕುಸ್ತಿಪಟುಗಳು ಈ ಹಿಂದೆ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿ ಮಾಡಿದ್ದರು. ಅವರು ಕೂಡಾ ಕುಸ್ತಿಪಟಿಗಳಿಗೆ ನ್ಯಾಯಯುತ ತನಿಖೆಯ ಭರವಸೆ ನೀಡಿದ್ದರು.
ಕುಸ್ತಿಪಟುಗಳು ತಾವು ಗೆದ್ದ ಪದಕಗಳನ್ನು ಗಂಗಾ ನದಿಯಲ್ಲಿ ಮುಳುಗಿಸಲು ಹರಿದ್ವಾರಕ್ಕೆ ತೆರಳಿದ ಕೆಲವು ದಿನಗಳ ನಂತರ ತಡರಾತ್ರಿ ಅಮಿತ್ ಶಾ ಅವರೊಂದಿಗಿನ ಸಭೆ ನಡೆದಿದೆ. ಆದರೆ ರೈತ ಮುಖಂಡ ರಾಕೇಶ್ ಟಿಕಾಯತ್ ಅವರು ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಜೂನ್ 9 ರೊಳಗೆ ಬಂಧಿಸುವಂತೆ ಸರ್ಕಾರಕ್ಕೆ ಅಂತಿಮ ಗಡುವು ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw