ಯಡಿಯೂರಪ್ಪ ಎಷ್ಟು ಕಮಿಷನ್ ನೀಡಿದ್ದಾರೆ?: ದಿಂಗಾಲೇಶ್ವರ ಶ್ರೀಗೆ ಶಾಸಕ ಯತ್ನಾಳ್ ಪ್ರಶ್ನೆ
ವಿಜಯಪುರ: ಮಠಗಳಿಗೆ ಅನುದಾನ ನೀಡಲು ಶೇ.30ರಷ್ಟು ಕಮಿಷನ್ ಪಡೆಯಲಾಗುತ್ತಿದೆ ಎಂದು ಸರ್ಕಾರದ ವಿರುದ್ಧ ದಿಂಗಾಲೇಶ್ವರ ಶ್ರೀಗಳು ಗಂಭೀರ ಆರೋಪ ಮಾಡಿದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಶ್ರೀಗಳು ಯಾರಿಗೆ ಕೊಟ್ಟರು? ಎಲ್ಲಿ ಕೊಟ್ಟರು? ಇದಕ್ಕೆ ಸಾಕ್ಷಿ ಏನು ಎಂದು ಪ್ರಶ್ನಿಸಿದರು.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, , ನಾಡಿನ ಬಗ್ಗೆ ಒಳ್ಳೆಯದನ್ನೂ ಬಯಸುವ ಸ್ವಾಮೀಜಿಗಳು ಸಾಕ್ಷಿ ಸಮೇತ ಮಾತನಾಡಬೇಕು. ಸತ್ಯ, ಧರ್ಮ, ನ್ಯಾಯ-ನೀತಿ ಬಗ್ಗೆ ಪ್ರವಚನ ಮಾಡುತ್ತಾರೆ. ಮೊದಲು ಶೇ. 30ರಷ್ಟು ಯಾರಿಗೆ ಕೊಟ್ಟಿದ್ದಾರೆ, ಅದನ್ನು ನೀವ್ಯಾಕೆ ನೀಡಿದ್ದೀರಿ ಎಂದು ಪ್ರಶ್ನಿಸಿದರು.
ಮಠದಲ್ಲಿ ಕುಳಿತು ಒಳ್ಳೆಯ ವಿಚಾರ ಹೇಳುವುದು ಬಿಟ್ಟು ವಿಜಯೇಂದ್ರನಿಂದ ಹಣ ತೆಗೆದುಕೊಂಡು, ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ಇಳಿಸಿದರೆ ಬಿಜೆಪಿ ಸರ್ವನಾಶವಾಗುತ್ತದೆ ಎಂದು ಹೇಳಿದ್ದೀರಿ. ಆಗ ವಿಜಯೇಂದ್ರ ಎಷ್ಟು ಕಮಿಷನ್ ಕೊಟ್ಟಿದ್ದರು ಎಂದು ಪ್ರಶ್ನಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಅನುಮತಿಯಿಲ್ಲದೆ ಧಾರ್ಮಿಕ ಮೆರವಣಿಗೆಗಳನ್ನು ನಡೆಸಲು ಅವಕಾಶವಿಲ್ಲ :ಯೋಗಿ ಆದಿತ್ಯನಾಥ್
ಅಶ್ಲೀಲ ಚಿತ್ರದಲ್ಲಿರುವುದು ಪತ್ನಿ ಎಂದು ಶಂಕಿಸಿ ಪತ್ನಿಯ ಬರ್ಬರ ಹತ್ಯೆ!
ಕಾರು -ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು
ಶಾಲೆಯಲ್ಲಿ ಸರಣಿ ಬಾಂಬ್ ಸ್ಫೋಟ: ಮಕ್ಕಳ ಸಹಿತ 6 ಮಂದಿಯ ದಾರುಣ ಸಾವು
ಮತ್ತೆ ಕ್ಷಿಪಣಿ ದಾಳಿ ಆರಂಭಿಸಿದ ರಷ್ಯಾ: 17 ಉಕ್ರೇನ್ ನಾಗರಿಕರ ಹತ್ಯೆ