ರಂಗಸ್ಥಳದಲ್ಲೇ ಹೃದಯಾಘಾತದಿಂದ ಮೃತಪಟ್ಟ ಯಕ್ಷಗಾನ ಕಲಾವಿದ! - Mahanayaka

ರಂಗಸ್ಥಳದಲ್ಲೇ ಹೃದಯಾಘಾತದಿಂದ ಮೃತಪಟ್ಟ ಯಕ್ಷಗಾನ ಕಲಾವಿದ!

guruvappa bayaru
23/12/2022

ಯಕ್ಷಗಾನ ನಡೆಯುತ್ತಿದ್ದಾಗ ರಂಗಸ್ಥಳದಲ್ಲೇ ಹೃದಯಾಘಾತವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಮೇಳದ ಕಲಾವಿದರೊಬ್ಬರು ನಿಧನರಾದ ಘಟನೆ ನಡೆದಿದೆ.

ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ‌ ಮೇಳದ ಕಲಾವಿದ ಗುರುವಪ್ಪ ಬಾಯಾರು (58), ಮೃತಪಟ್ಟವರು. ಕಟೀಲು ಕ್ಷೇತ್ರದ ಸರಸ್ವತೀ ಸದನದಲ್ಲಿ ಗುರುವಾರ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿದ್ದ ಸಂದರ್ಭ ಶಿಶುಪಾಲನ ಪಾತ್ರಧಾರಿಯಾಗಿದ್ದ ಗುರುಪಪ್ಪ ಬಾಯರು  ರಂಗಸ್ಥಳದಲ್ಲೇ ಇದ್ದರು.

guruvappa bayaru


Provided by

ಇನ್ನೊಂದು ಪಾತ್ರಧಾರಿ ಯಕ್ಷಗಾನದ ರಂಗಸ್ಥಳದಲ್ಲಿ ಕುಣಿಯುತ್ತಿದ್ದಾಗ ಅಲ್ಲೇ ಇದ್ದ ಗುರುವಪ್ಪ ಬಾಯಾರು ಅವರಿಗೆ  ಹೃದಯಾಘಾತವಾಗಿ ರಂಗಸ್ಥಳದಲ್ಲಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸ್ಥಳೀಯ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ