ಯಶ್ ತಂದೆ-ತಾಯಿ ಹಾಗೂ ಗ್ರಾಮಸ್ಥರ ನಡುವೆ ಗಲಾಟೆ
09/03/2021
ಹಾಸನ: ಜಮೀನಿಗೆ ರಸ್ತೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ನಟ ರಾಕಿಂಗ್ ಸ್ಟಾರ್ ಯಶ್ ಅವರ ತಂದೆ-ತಾಯಿ ಹಾಗೂ ಗ್ರಾಮಸ್ಥರ ನಡುವೆ ಭಾರೀ ಹಲಾಟೆ ನಡೆದಿದ್ದು, ಹಾಸನ ಜಿಲ್ಲೆಯ ದುದ್ದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಯಶ್ ತಂದೆ ಅರುಣ್ ಕುಮಾರ್ ಹಾಗೂ ತಾಯಿ ಪುಷ್ಪಾ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿರುವ ಸಂದರ್ಭ ಕೆಲವರು ಇಲ್ಲಿ ಕೆಲಸ ಮಾಡಬೇಡಿ ಎಂದು ತಡೆ ನೀಡಿದ್ದಾರೆ ಎನ್ನಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದೆ.
ಹಾಸನ ಜಿಲ್ಲೆಯ ದುದ್ದ ಬಳಿ ಇರುವ ತಿಮ್ಮೇನಹಳ್ಳಿಯಲ್ಲಿನ ಅರುಣ್ ಕುಮಾರ್ ಹಾಗೂ ಪುಷ್ಪ ಅವರು ಜಮೀನಿನಲ್ಲಿ ರಸ್ತೆ ನಿರ್ಮಾಣ ಮಾಡುವ ಸಂದರ್ಭ ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು, ಇಲ್ಲಿ ರಸ್ತೆ ನಿರ್ಮಾಣ ಮಾಡಬೇಡಿ ಎಂದು ಗಲಾಟೆ ಮಾಡಿದ್ದು, ಈ ಸಂಬಂಧ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಧ್ಯಸ್ಥಿಕೆ ವಹಿಸಿದ ಬಳಿಕ ಪರಿಸ್ಥಿತಿ ಶಾಂತವಾಗಿದೆ ಎನ್ನಲಾಗಿದೆ.