ಬಿಜೆಪಿಯಿಂದ ಯತ್ನಾಳ್ ಉಚ್ಛಾಟನೆ!

26/03/2025
ಬೆಂಗಳೂರು: ಬಿಜೆಪಿ ಬಂಡಾಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದ್ದು, 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಛಾಟನೆ ಮಾಡಿ ಶಿಸ್ತು ಸಮಿತಿ ಆದೇಶಿಸಿದೆ.
ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ನೇರಾನೇರ ಆರೋಪ ಮಾಡಿದ ಬಳಿಕ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು.
ಶಿಸ್ತು ಸಮಿತಿಯ ನೋಟಿಸ್ ಗೆ ಸರಿಯಾದ ಉತ್ತರ ನೀಡದ ಹಿನ್ನೆಲೆ ಯತ್ನಾಲ್ ಅವರನ್ನು ಬಿಜೆಪಿ 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಛಾಟನೆ ಮಾಡಿ ಆದೇಶಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: