ಯಾವ ಸಾಧನೆಗೆ ಸಂಭ್ರಮ? 'ವೈಫಲ್ಯದ ವಿಶ್ವಗುರು' ಕುಖ್ಯಾತಿಗಾಗಿಯೇ? | ಕೇಂದ್ರ ಸರ್ಕಾರದ ಕಿವಿ ಹಿಂಡಿದ ಸಿದ್ದರಾಮಯ್ಯ - Mahanayaka
7:04 AM Thursday 19 - September 2024

ಯಾವ ಸಾಧನೆಗೆ ಸಂಭ್ರಮ? ‘ವೈಫಲ್ಯದ ವಿಶ್ವಗುರು’ ಕುಖ್ಯಾತಿಗಾಗಿಯೇ? | ಕೇಂದ್ರ ಸರ್ಕಾರದ ಕಿವಿ ಹಿಂಡಿದ ಸಿದ್ದರಾಮಯ್ಯ

siddaramaiha
22/10/2021

ಬೆಂಗಳೂರು: ಸುಳ್ಳು ಸಾಧನೆಗಳ ಖಾಲಿ ತಟ್ಟೆ ಬಡಿಯುತ್ತಾ ದೇಶದ ಜನರನ್ನು ಮರುಳು ಮಾಡುತ್ತಾ ಬಂದ ನರೇಂದ್ರ ಮೋದಿ ಅವರೇ? ಮೊದಲು ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಎರಡು ಡೋಸ್ ಲಸಿಕೆ ನೀಡಲು ಗಂಭೀರವಾಗಿ ಸರ್ಕಾರವನ್ನು ತೊಡಗಿಸಿಕೊಳ್ಳಿ. ಸಾಧನೆಯ ಸಂಭ್ರಮಾಚರಣೆ ಆ ಮೇಲೆ ಮಾಡೋಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಕಿವಿ ಹಿಂಡಿದ್ದಾರೆ.

ಅಮೆರಿಕ 56%, ಚೀನಾ 70% ಜನಸಂಖ್ಯೆಗೆ ಎರಡು ಡೋಸ್ ಕೊರೊನಾ ಲಸಿಕೆ ನೀಡಿ ಬೂಸ್ಟರ್ ಲಸಿಕೆ ನೀಡುವ ಸಿದ್ದತೆಯಲ್ಲಿದೆ. ಭಾರತದಲ್ಲಿ ಕೇವಲ 21% ಜನಸಂಖ್ಯೆಗೆ ಮಾತ್ರ ಎರಡು ಡೋಸ್ ಲಸಿಕೆ ನೀಡಲಾಗಿದೆ. ಯಾವ ಸಾಧನೆಗೆ ಸಂಭ್ರಮ? ‘ವೈಫಲ್ಯದ ವಿಶ್ವಗುರು’ ಕುಖ್ಯಾತಿಗಾಗಿಯೇ? ಎಂದು ಪ್ರಶ್ನಿಸಿದ್ದಾರೆ.

ಘೋಷಿತ ಗುರಿಯಂತೆ ದೇಶದ 103 ಕೋಟಿ ವಯಸ್ಕರಿಗೆ ಡಿಸೆಂಬರ್ 31ರೊಳಗೆ 2 ಡೋಸ್ ನೀಡಲು 206 ಕೋಟಿ ಲಸಿಕೆ ಬೇಕಾಗಿದೆ. ಕೊಟ್ಟಿರುವುದು 100 ಕೋಟಿ ಮಾತ್ರ. ಗುರಿ ತಲುಪಲು ಪ್ರತಿದಿನ 1.51 ಕೋಟಿ ಲಸಿಕೆ ನೀಡಬೇಕಾಗಿದೆ ಇದಕ್ಕಾಗಿ ಬೇಕಾಗಿರುವುದು ಸಿದ್ದತೆ, ಖಾಲಿ ತಟ್ಟೆಯ ಪ್ರಚಾರ ಅಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Provided by

ದೇಶದಲ್ಲಿ ಇಲ್ಲಿಯವರೆಗೆ 29 ಕೋಟಿ ಜನರಿಗೆ ಎರಡು ಡೋಸ್ ಮತ್ತು 42 ಕೋಟಿ ಜನರಿಗೆ ಒಂದು ಡೋಸ್ ಲಸಿಕೆ ಮಾತ್ರ ನೀಡಲಾಗಿದೆ. 139 ಕೋಟಿ ಜನರಲ್ಲಿ 68 ಕೋಟಿ ಜನರಿಗೆ ಇನ್ನು ಒಂದು ಡೋಸ್ ಲಸಿಕೆ ಕೂಡಾ ನೀಡಿಲ್ಲ. ಯಾವ ಸಾಧನೆಗೆ ಸಂಭ್ರಮಾಚರಣೆ? ಎಂದು ಅವರು ಪ್ರಶ್ನಿಸಿದ್ದಾರೆ.

ದೇಶದ 139 ಕೋಟಿ ಜನರಲ್ಲಿ 29 ಕೋಟಿ ಜನರಿಗೆ ಮಾತ್ರ ಎರಡು ಡೋಸ್ ಕೊರೊನಾ ಲಸಿಕೆ ನೀಡಿರುವ ಸರ್ಕಾರ, ಅತ್ಯವಸರದಿಂದ 100 ಕೋಟಿ ಲಸಿಕೆ ನೀಡಿಕೆಯ ಸಂಭ್ರಮಾಚರಣೆಯ ಖಾಲಿ ತಟ್ಟೆ ಬಡಿಯುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಇನ್ನಷ್ಟು ಸುದ್ದಿಗಳು…

ಮಂಗಳೂರಿನ ಸಂಘದ ಪ್ರಚಾರಕರ ಕುಟುಂಬದ ಹೆಣ್ಣು ಮಗಳೊಬ್ಬರನ್ನು ಹಾಳು ಮಾಡಿ ಬಾಂಬೆಗೆ ಓಡಿ ಹೋಗಿದ್ದವರು ಯಾರು? | ಕುಮಾರಸ್ವಾಮಿ ಪ್ರಶ್ನೆ

ಐವಾನ್ ಡಿಸೋಜಾ ಮನೆಯಿಂದಲೇ ಮತಾಂತರ ಆರಂಭವಾಗಿದೆ | ರಾಜಶೇಖರಾನಂದ ಸ್ವಾಮೀಜಿ ಹೇಳಿಕೆ

ಜಾನುವಾರುಗಳಿಗೆ ಆಸರೆಯಾಗಿದ್ದ ಸಬ್ ಇನ್ ಸ್ಪೆಕ್ಟರ್ ಮಹಮ್ಮದ್ ರಫೀಕ್ ಹೃದಯಾಘಾತದಿಂದ ನಿಧನ

ಡ್ರಗ್ಸ್ ದಂಧೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರದ್ದೇ ದೊಡ್ಡಪಾಲು | ಪ್ರಿಯಾಂಕ್ ಖರ್ಗೆ

ಸಾರ್ವಜನಿಕ ಸ್ಥಳಗಳಲ್ಲಿ ತಲ್ವಾರ್ ಪ್ರದರ್ಶಿಸಿದ ಸಂಘ ಪರಿವಾರದ ವಿರುದ್ಧ ಪ್ರಕರಣ ದಾಖಲಿಸಲು ಪಾಪ್ಯುಲರ್ ಫ್ರಂಟ್ ಆಗ್ರಹ

ಹಿಂದೂ ಧರ್ಮೀಯರ ಮೇಲಿನ ದಾಳಿ ವಿರುದ್ಧ ವಿಎಚ್ ಪಿ, ಬಜರಂಗದಳ ಪ್ರತಿಭಟನೆ

 

ಇತ್ತೀಚಿನ ಸುದ್ದಿ