ಮಸೀದಿ, ಚರ್ಚ್, ದೇವಸ್ಥಾನ ಅಂತ ಇಲ್ಲ,  ಯಾವುದೇ ಇದ್ದರೂ ತೆರವು ಮಾಡುತ್ತೇವೆ | ರಾಮನಗರ ಡಿಸಿ - Mahanayaka
2:22 PM Wednesday 5 - February 2025

ಮಸೀದಿ, ಚರ್ಚ್, ದೇವಸ್ಥಾನ ಅಂತ ಇಲ್ಲ,  ಯಾವುದೇ ಇದ್ದರೂ ತೆರವು ಮಾಡುತ್ತೇವೆ | ರಾಮನಗರ ಡಿಸಿ

rakesh kumar
14/09/2021

ರಾಮನಗರ:  ಮೈಸೂರಿನಲ್ಲಿ ಅಕ್ರಮ ಕಟ್ಟಡ ತೆರವಿಗೆ ಸಂಬಂಧಿಸಿದಂತೆ ದೇವಸ್ಥಾನ ನೆಲಸಮ ಮಾಡಿದ ವಿಚಾರ ಇನ್ನೂ ಚರ್ಚೆಯಲ್ಲಿರುವಾಗಲೇ ರಾಮನಗರದಲ್ಲಿಯೂ ಅಕ್ರಮ ಕಟ್ಟಡ ತೆರವಿನ ಸುಳಿವನ್ನು ರಾಮನಗರ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ನೀಡಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ ಒಟ್ಟು 34 ಅನಧಿಕೃತ ಕಟ್ಟಡಗಳನ್ನು ಗುರುತಿಸಲಾಗಿದ್ದು, ಅದರಲ್ಲಿ 18 ಅನಧಿಕೃತ ಕಟ್ಟಡಗಳನ್ನು ತೆರವು ಮಾಡಲಾಗಿದೆ. 13 ಕಟ್ಟಡಗಳನ್ನು ಅಧಿಕೃತ ಮಾಡಲಾಗಿದೆ.  3 ಕಟ್ಟಡಗಳ ತೆರವು ಕಾರ್ಯಬಾಕಿ ಇದೆ ಎಂದು ಅವರು ಹೇಳಿದರು.

2009ರ ನಂತರ ನಿರ್ಮಾಣವಾದ ಅಕ್ರಮ ಕಟ್ಟಡಗಳನ್ನು ತೆರವು ಮಾಡಲಾಗುತ್ತದೆ. ಅಂತಹ ಕಟ್ಟಡಗಳನ್ನು ಕಾಲ ಕ್ರಮೇಣ ತೆರವು ಮಾಡಲಾಗುತ್ತದೆ. ಇದರಲ್ಲಿ ಮಸೀದಿ, ಚರ್ಚ್, ದೇವಸ್ಥಾನ ಅಂತ ಇಲ್ಲ. ಯಾವುದೇ ಇದ್ದರೂ ತೆರವು ಮಾಡುತ್ತೇವೆ ಎಂದು ಅವರು ಹೇಳಿದರು ಎಂದು ವರದಿಯಾಗಿದೆ. ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಜಮೀನುಗಳನ್ನು ಜಿಲ್ಲಾಡಳಿತ ವಶಕ್ಕೆ ಪಡೆದುಕೊಂಡಿದೆ ಎಂದು ಇದೇ ಸಂದರ್ಭದಲ್ಲಿ ಅವರು ತಿಳಿಸಿದರು.

rpi

ಇನ್ನಷ್ಟು ಸುದ್ದಿಗಳು…

ಪ್ರಧಾನಿ ಮೋದಿ ಖಾತೆಗೆ ಹಣ ಹಾಕಿದ್ದಾರೆ ಎಂದು ಭಾವಿಸಿ ಖರ್ಚು ಮಾಡಿ ಜೈಲು ಸೇರಿದ ಯುವಕ!

ನೀವು ಲಿಂಬೆ ಸೋಡಾವನ್ನು ಅತೀಯಾಗಿ ಕುಡಿಯುತ್ತೀರಾ? | ಹಾಗಿದ್ದರೆ, ಈ ವಿಚಾರ ನೀವು ತಿಳಿಯಲೇ ಬೇಕು

ಹಾಸ್ಯ ನಟ ರಾಜು ತಾಳಿಕೋಟೆ ಮೇಲೆಯೂ ಹಲ್ಲೆ: ಆಸ್ಪತ್ರೆಗೆ ದಾಖಲಾಗಿರುವ ನಟ

ಎಸ್ ಬಿಐ ಗ್ರಾಹಕರಿಗೆ ಮುಖ್ಯ ಸುದ್ದಿ:  ನಾಳೆ 2 ಗಂಟೆಗಳ ಕಾಲ ಬ್ಯಾಂಕಿಂಗ್ ಸೇವೆ ಇಲ್ಲ

ಆಸ್ತಿಗಾಗಿ ಸಹೋದರರ ಜಗಳ: ಕಟ್ಟಡದ ಮೇಲಿನಿಂದ ಓರ್ವ ಸಹೋದರನನ್ನು ಕೆಳಕ್ಕೆಸೆಯಲು ಯತ್ನ

ತಂದೆಯನ್ನು ಕೊಂದು, ಕುಡಿದು ಬಿದ್ದು ಸತ್ತ ಎಂದು ನಂಬಿಸಿದ ಪುತ್ರ | ಪುತ್ರನ ಹೈಡ್ರಾಮ ಬಯಲಾಗಿದ್ದು ಹೇಗೆ ಗೊತ್ತಾ?

ಕೇವಲ ಐದು ರೂಪಾಯಿಗಾಗಿ ಬುಡಕಟ್ಟು ಸಮುದಾಯದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

ಇತ್ತೀಚಿನ ಸುದ್ದಿ